100 ದಿನಗಳಲ್ಲಿ 3000 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ: ಮೋದಿ

ದೇಶಾದ್ಯಂತ 3000 ಗ್ರಾಮಗಳಿಗೆ 100 ದಿನಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ದೇಶಾದ್ಯಂತ 3000 ಗ್ರಾಮಗಳಿಗೆ 100 ದಿನಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ- 2015 ರಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ಮೋದಿ, ಕೇಂದ್ರ ಸರ್ಕಾರ 100 ದಿನಗಳಲ್ಲಿ ಸುಮಾರು 1 ,900 ಸಾವಿರ ಗ್ರಾಮಗಳಿಗೆ ಸಂಪೂರ್ಣ ವಿದ್ಯುತ್ ಸಂಪರ್ಕ ನೀಡುವ ಗುರಿ ಹೊಂದಲಾಗಿತ್ತು. ನಿಗದಿತ ಗುರಿಗಿಂತ ಅಧಿಕವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದೆ ಎಂದು ಹೇಳಿದ್ದಾರೆ.
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳೇ ಕಳೆದಿದ್ದರೂ, ಭಾರತದಲ್ಲಿ ವಿದ್ಯುತ್ ಕಂಬಗಳೇ ಇಲ್ಲದ 18 ,000 ಗ್ರಾಮಗಳಿವೆ. ಕಲ್ಲಿದ್ದಲು ಹಾಗೂ ವಿದ್ಯುತ್ ಉದ್ಯಮಕ್ಕೆ ಸೇರಿದ ಯೋಜನೆಗಳು ಕ್ಷಿಪ್ರಗತಿಯಲ್ಲಿ ಸಾಗುತ್ತಿದ್ದು, ಭಾರತದ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ವಾರ್ಷಿಕವಾಗಿ ಶೇ.8 .5 ರಷ್ಟು ಬೆಳವಣಿಗೆಯಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com