
ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಒಂದು ವೇಳೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಡುವೆ ಮೈತ್ರಿ ಏರ್ಪಟ್ಟರೇ, ಮುಲಾಯಂ ಸಿಂಗ್ ಯಾದವ್ ಪ್ರಧಾನ ಮಂತ್ರಿಯಾಗುತ್ತಾರೆ, ರಾಹುಲ್ ಗಾಂಧಿ ಉಪ ಪ್ರಧಾನಿಯಾಗಲಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾರೆ.
ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಕೇಂದ್ರದಲ್ಲಿ ಮೈತ್ರಿ ಬಗ್ಗೆ ಸುಳಿವು ನೀಡಿದ್ದಾರೆ.
ರಾಹುಲ್ ಗಾಂಧಿ ನನ್ನ ಹಳೇಯ ಸ್ನೇಹಿತ, ಒಂದು ವೇಳೆಕಾಂಗ್ರೆಸ್ ಮೈತ್ರಿಗೆ ಒಪ್ಪಿ, ಮುಲಾಯಂ ಸಿಂಗ್ ಯಾದವ್ ಅವರನ್ನು ಪ್ರಧಾನಿ ಮಾಡುವುದಾದರೇ ಈ ಕ್ಷಣವೇ ಮೈತ್ರಿಗೆ ಸಿದ್ದ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ
Advertisement