
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯ ತಂಘ್ದರ್‌ನಲ್ಲಿ ಗಡಿ ನುಸುಳುತ್ತಿದ್ದ ಶಸ್ತ್ರಸಜ್ಜಿತ ಮೂವರು ಉಗ್ರರನ್ನು ಸೇನಾಪಡೆ ಹೊಡೆದುರುಳಿಸಿದೆ.
ಉಗ್ರರು ಗಡಿ ನುಸುಳುತ್ತಿರುವುದು ಗಮನಕ್ಕೆ ಬಂದ ನಂತರ ಸೇನಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ವೇಳೆ ಉಗ್ರರ ಮತ್ತು ಸೇನಾಪಡೆ ನಡುವೆ ಭಾರಿ ಗುಂಡಿನ ಚಕಮಕಿ ನಡೆಯಿತು. ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ರಕ್ಷಣಾ ವಕ್ತಾರ ಲೆ.ಕರ್ನಲ್ ಮನಿಷ್ ಮೆಹ್ತಾ ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಯಾವುದೇ ಸೇನಾ ಸಿಬ್ಬಂದಿ ಮೃತಪಟ್ಟಿಲ್ಲ ಮತ್ತು ಗಾಯಗೊಂಡಿಲ್ಲ. ಆದರೆ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.
Advertisement