ಡಿ.8ರಂದು ಪಾಕಿಸ್ತಾನಕ್ಕೆ ಸುಷ್ಮಾ ಸ್ವರಾಜ್ ಭೇಟಿ

ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಡಿಸೆಂಬರ್ 8ರಂದು ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದಾರೆ.
ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್
Updated on: 

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಡಿಸೆಂಬರ್ 8ರಂದು ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದಾರೆ.

ಡಿಸೆಂಬರ್ 8ರಂದು ಇಸ್ಲಾಮಾಬಾದ್ ನಲ್ಲಿ ನಡೆಯುವ ಏಷ್ಯಾ ಭದ್ರತಾ ಸಮಾವೇಶದಲ್ಲಿ  ಸುಷ್ಮಾ ಸ್ವರಾಜ್ ಅವರು ಭಾಗವಹಿಸುತ್ತಿದ್ದಾರೆ. ಅವರೊಂದಿಗೆ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಅವರು ಸಹ ಪಾಕಿಸ್ತಾನಕ್ಕೆ ತೆರಳುತ್ತಿದ್ದಾರೆ.

ಸುಷ್ಮಾ ಸ್ವರಾಜ್ ಅವರು ಪಾಕ್ ಪ್ರಧಾನಿ ನವಾಜ್ ಷರೀಫ್ ಹಾಗೂ ಅವರ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜಿಜ್ ಅವರನ್ನು ಸಹ ಭೇಟಿ ಮಾಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.

ಪ್ಯಾರಿಸ್ ನಲ್ಲಿ ಪ್ರಧಾನಿ ನರೇಂದ್ರ ಹಾಗೂ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹ್ಯಾಂಡ್ ಶೇಕ್ ಮಾಡಿದ ನಂತರ ಸುಷ್ಮಾ ಸ್ವರಾಜ್ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವುದು  ಕೂತೂಹಲ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com