

ಲಖನೌ: ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಅಯೋಧ್ಯೆಯಲ್ಲಿ ಧ್ವಂಸಗೊಂಡಿರುವ ಬಾಬ್ರಿ ಮಸೀದಿ ನಿರ್ಮಾಣ ಮಾಡಬೇಕು ಎಂದು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಸಚಿವ ಅಜಂ ಖಾನ್ ಹೇಳಿದ್ದಾರೆ.
ಬಾಬ್ರಿ ಮಸೀದಿ ಧ್ವಂಸವಾದ 23ನೇ ಕರಾಳ ವರ್ಷಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅಝಂ ಖಾನ್ ಈ ರೀತಿ ಹೇಳಿಕೆ ನೀಡಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್)ನವರು ಸಲಿಂಗಕಾಮಿಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಅಜಂ ಖಾನ್, ಇಂದು ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡಬೇಕು ಆಗ ಮಾತ್ರ ಬಿಜೆಪಿ ಮತ್ತೆ ಅಧಿಕಾರ ಹಿಡಿಯಬಹುದು ಎಂದಿದ್ದಾರೆ.