ಪಾಕಿಸ್ತಾನ- ಭಾರತ ಎನ್ಎಸ್ಎ ಮಟ್ಟದ ಸಭೆ ಯಶಸ್ವಿ

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ನಡೆದ ಪಾಕಿಸ್ತಾನ- ಭಾರತ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವಿನ ದ್ವಿಪಕ್ಷೀಯ ಮಾತುಕತೆ ಯಶಸ್ವಿಯಾಗಿದೆ.
ಪಾಕಿಸ್ತಾನ- ಭಾರತ ರಾಷ್ಟ್ರೀಯ ಭದ್ರತಾ ಸಲಹೆಗಾರರ ಭೇಟಿ(ವಿದೇಶಾಂಗ ಇಲಾಖೆ ಟ್ವೀಟ್ ಚಿತ್ರ)
ಪಾಕಿಸ್ತಾನ- ಭಾರತ ರಾಷ್ಟ್ರೀಯ ಭದ್ರತಾ ಸಲಹೆಗಾರರ ಭೇಟಿ(ವಿದೇಶಾಂಗ ಇಲಾಖೆ ಟ್ವೀಟ್ ಚಿತ್ರ)
Updated on: 

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ನಡೆದ ಪಾಕಿಸ್ತಾನ- ಭಾರತ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವಿನ ದ್ವಿಪಕ್ಷೀಯ ಮಾತುಕತೆ ಯಶಸ್ವಿಯಾಗಿದೆ.
ಉಭಯ ದೇಶಗಳ ನಡುವಿನ ರಚನಾತ್ಮಕ ಸಂಬಂಧವನ್ನು ಮುಂದುವರೆಸುವುದಕ್ಕೆ ಅಜಿತ್ ದೋವಲ್, ಪಾಕ್ ಎನ್ ಎಸ್ ಎ ನಾಸಿರ್ ಖಾನ್ ಜಂಜುವಾ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು ದ್ವಿಪಕ್ಷೀಯ ಸಂಬಂಧವನ್ನು ಮುಂದುವರೆಸಲು ತೀರ್ಮಾನಿಸಿದ್ದಾರೆ ಎಂದು ವಿದೇಶಾಂಗ ಇಲಾಖೆ ಬಿಡುಗಡೆ ಮಾಡಿರುವ ಪತ್ರಿಕಾ ವರದಿ ತಿಳಿಸಿದೆ. 
ಪ್ಯಾರಿಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ- ಪಾಕ್ ಪ್ರಧಾನಿ ನವಾಜ್ ಷರೀಫ್ ಭೇಟಿ ನಂತರ ಎನ್ಎಸ್ಎ ಮಟ್ಟದ ದ್ವಿಪಕ್ಷೀಯ ಮಾತುಕತೆ ನಡದಿದೆ. ದ್ವಿಪಕ್ಷೀಯ ಮಾತುಕತೆಯಲ್ಲಿ ಜಮ್ಮು-ಕಾಶ್ಮೀರ, ಭಯೋತ್ಪಾದನೆ ಸೇರಿದಂತೆ ಹಲವು ವಿಷಯಗಳು ಚರ್ಚೆಯಾಗಿದ್ದು, ಈ ತಿಂಗಳಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಎನ್ಎಸ್ಎ ಮಟ್ಟದ ದ್ವಿಪಕ್ಷೀಯ ಸಭೆ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com