ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರ ದಾಳಿ: 5 ಗಾಯ

ಸಿಆರ್ ಪಿಎಫ್ ಯೋಧರಿದ್ದ ಬಸ್ಸಿನ ಮೇಲೆ ಉಗ್ರರು ದಾಳಿ ನಡೆಸಿದ್ದು, ಪರಿಣಾಮ 5 ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅನಂತ್ನಾಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ...
ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರ ದಾಳಿ: 5 ಗಾಯ (ಫೋಟೋ ಕೃಪೆ: ಎಎನ್ಐ)
ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರ ದಾಳಿ: 5 ಗಾಯ (ಫೋಟೋ ಕೃಪೆ: ಎಎನ್ಐ)

ಶ್ರೀನಗರ: ಸಿಆರ್ ಪಿಎಫ್ ಯೋಧರಿದ್ದ ಬಸ್ಸಿನ ಮೇಲೆ ಉಗ್ರರು ದಾಳಿ ನಡೆಸಿದ್ದು, ಪರಿಣಾಮ 5 ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅನಂತ್ನಾಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಸಿಆರ್ ಪಿಎಫ್ ಯೋಧರಿದ್ದ ಬಸ್ಸು ಜಮ್ಮುವಿನಿಂದ ಶ್ರೀನಗರಕ್ಕೆ ಹೋಗುತ್ತಿತ್ತು. ಶ್ರೀನಗರಕ್ಕೆ ಹೋಗಲು ಇನ್ನು 50 ಕಿ.ಮೀ ಇರುವಾಗ ಹೆದ್ದಾರಿ ಬಳಿ ಬಂದ ಉಗ್ರರು ಇದ್ದಕ್ಕಿದ್ದಂತೆ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆಯಲ್ಲಿ 5 ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಅನಂತ್ನಾಗ್ ಜಿಲ್ಲೆಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರನ್ನು ಹಿಡಿಯಲು ಭದ್ರತಾ ಸಿಬ್ಬಂದಿಗಳು ಕಾರ್ಯಾಚರಣೆಗಿಳಿದಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com