ಭಾರತ-ಪಾಕ್ ಎನ್ಎಸ್ಎ 'ರಹಸ್ಯ' ಮಾತುಕತೆ: ಮೋದಿ ವಿವರಣೆಗೆ ವಿಪಕ್ಷಗಳ ಆಗ್ರಹ

ಬ್ಯಾಂಕಾಂಕ್ ನಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಮತ್ತು ಪಾಕಿಸ್ತಾನ ಸರ್ಕಾರದ ನಡುವೆ ನಡೆದ ರಹಸ್ಯ ಸಭೆಯ ಮಾತುಕತೆಯ ವಿವರಗಳನ್ನು ಸಂಸತ್ತಿನಲ್ಲಿ ಪ್ರಧಾನಿ....
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ಬ್ಯಾಂಕಾಂಕ್ ನಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಮತ್ತು ಪಾಕಿಸ್ತಾನ ಸರ್ಕಾರದ ನಡುವೆ ನಡೆದ ಮಾತುಕತೆಯ ವಿವರಗಳನ್ನು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿವರಿಸಬೇಕು ಎಂದು ವಿಪಕ್ಷಗಳು ಪ್ರತಿಪಕ್ಷಗಳು ಆಗ್ರಹಿಸಿವೆ.

ಎನ್ ಎಸ್ ಎ ಮತ್ತು ಪಾಕಿಸ್ತಾನದ ನಡುವೆ ನಡೆದ ಮಾತುಕತೆಯ ವಿವರ ರಹಸ್ಯವಾಗಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಆಕ್ರೋಶಗೊಂಡ ವಿಪಕ್ಷಗಳು ಮಾತುರಕತೆ ವಿವರವನ್ನು ಸದನದಲ್ಲಿ ವಿವರಿಸಬೇಕು ಎಂದು ಪಟ್ಟು ಹಿಡಿದಿವೆ.

ಮಾತುಕತೆಯ ಎಲ್ಲಾ ವಿವರಗಳನ್ನು ಸಂಸತ್ತಿಗೆ ತಿಳಿಸಬೇಕು ಎಂದು ಕಾಂಗ್ರೆಸ್ ಸಂಸದ ಹಾಗೂ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವ ಆನಂದ್ ಶರ್ಮಾ ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ, ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಆಫ್ಘನ್ ಸಮ್ಮೇಳನಕ್ಕಾಗಿ ತೆರಳುತ್ತಿದ್ದು, ಗುರುವಾರ ತಮ್ಮ ಹೇಳಿಕೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com