
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿಧಿ ಅವ್ಯವಹಾರ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿಯವರಿಗೆ ಸೋಮವಾರ ಹಿನ್ನೆಡೆಯುಂಟಾಗಿದ್ದು, ಸಮನ್ಸ್ ಪ್ರಶ್ನಿಸಿ ಸಲ್ಲಿಸಿಕೆಯಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಈ ಹಿಂದೆ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಪಟಿಯಾಲ ನ್ಯಾಯಾಲಯ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಸೋನಿಯಾ, ರಾಹುಲ್ ದೆಹಲಿ ಹೈ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿಯನ್ನು ವಿಚಾರಣೆ ನಡೆಸಿದ ಹೈ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.
ಸೋನಿಯಾ, ರಾಹುಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಇದೀಗ ಇಬ್ಬರೂ ಪಟಿಯಾಲ ನ್ಯಾಯಾಲಯದ ಸೂಚನೆಯಂತೆ ಇದೀಗ ವಿಚಾರಣೆಗೆ ಖುದ್ದು ಹಾಜರಾಗಬೇಕಿದೆ.
ಮೂಲಗಳ ಪ್ರಕಾರ ಸೋನಿಯಾ, ರಾಹುಲ್ ಅವರು ದೆಹಲಿ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
Advertisement