ಭಾರತ-ಪಾಕ್ ರಹಸ್ಯ ಸಭೆ ಬಗ್ಗೆ ಮೋದಿ ಸ್ಪಷ್ಟನೆ ನೀಡಲಿ: ಸಂಸತ್ತಿನಲ್ಲಿ ಪ್ರತಿಪಕ್ಷಗಳ ಪಟ್ಟು

ಬ್ಯಾಂಕಾಕ್ ನಡೆದ ಭಾರತ ಮತ್ತು ಪಾಕಿಸ್ತಾನದ ರಹಸ್ಯ ಸಭೆ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಬೇಕೆಂದು ಪ್ರತಿಪಕ್ಷಗಳು ಸೋಮವಾರ ಸಂಸತ್ತಿನಲ್ಲಿ ಆಗ್ರಹಿಸಿವೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)

ನವದೆಹಲಿ: ಬ್ಯಾಂಕಾಕ್ ನಡೆದ ಭಾರತ ಮತ್ತು ಪಾಕಿಸ್ತಾನದ ರಹಸ್ಯ ಸಭೆ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಬೇಕೆಂದು ಪ್ರತಿಪಕ್ಷಗಳು ಸೋಮವಾರ ಸಂಸತ್ತಿನಲ್ಲಿ ಆಗ್ರಹಿಸಿವೆ.

ನಿನ್ನೆಯಷ್ಟೇ ಭಾರತ ಮತ್ತು ಪಾಕಿಸ್ತಾನ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ಬ್ಯಾಂಕಾಕ್ ನಲ್ಲಿ ರಹಸ್ಯೆ ಸಬೆ ನಡೆಸಿದ್ದರು. ಈ ಭೇಟಿ ಇದೀಗ ಸಂಸತ್ತಿನಲ್ಲಿ ಸದ್ದು ಮಾಡುತ್ತಿದ್ದು, ರಹಸ್ಯ ಭೇಟಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ.

ಸಭೆಯಾಗಲೀ, ಭೇಟಿಯಾಗಲೀ ಈ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಬೇಕಾದದ್ದು ನಾಯಕರ ಜವಾಬ್ದಾರಿಯಾಗಿರುತ್ತೆ. ಭೇಟಿ ಬಗ್ಗೆ ಮೋದಿಯವರು ಮಾಹಿತಿ ನೀಡಬೇಕಿತ್ತು. ಆದರೆ ಈ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡದೇ ಇರುವುದು ಸಂಸತ್ತಿಗೆ ಅಗೌರವವನ್ನು ಸೂಚಿಸಿದಂತಾಗಿದೆ ಎಂದು ಕಾಂಗ್ರೆಸ್ ಸಂಸದ ಹಾಗೂ ಮಾಜಿ ವಿದೇಶಾಂಗ ಸಚಿವಾಲಯದ ಸಚಿವ ಆನಂದ್ ಶರ್ಮಾ ಅವರು ಹೇಳಿದ್ದಾರೆ.

ಇದೊಂದು ದೊಡ್ಡ ದ್ರೋಹವಾಗಿದೆ. ಮೇಲ್ನೋಟಕ್ಕೆ ಕಾಣುವ ಸರ್ಕಾರ ಜನರಿಗೆ ನಂಬಿಕೆ ದ್ರೋಹ ಮಾಡಿದೆ ಎಂದು ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಹೇಳಿದ್ದಾರೆ.

ಭದ್ರತಾ ಸಲಹೆಗಾರರ ಮಧ್ಯೆ ಸಾಕಷ್ಟು ಮಾತುಕತೆಗಳು ನಡೆದಿವೆ. ಆದರೆ, ಇದನ್ನು ರಹಸ್ಯವಾಗಿ ಯಾಕೆ ಇಡಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕ ಸೌಗತ ರಾಯ್ ಹೇಳಿದ್ದಾರೆ.

ಕಳೆದವಾರ ಪ್ಯಾರಿಸ್ ನಲ್ಲಿ ನಡೆದ ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನ ಪ್ರಧಾನಿ ನವಾಝ್ ಶರೀಫ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಇಬ್ಬರೂ ನಾಯಕರು ಸಭೆ ನಡೆಸುವ ನಿರ್ಧಾರವನ್ನು ತೆಗೆದುಕೊಂಡಿದ್ದರು. ಸಭೆಗೆ ಬ್ಯಾಂಕಾಂಕ್ ಸೂಕ್ತ ಸ್ಥಳವೆಂದು ಆಯ್ಕೆ ಮಾಡಿದ್ದರೆಂದು ಹೇಳಲಾಗುತ್ತಿತ್ತು.

ಮಾತುಕತೆಯಂತೆಯೇ ನಿನ್ನೆ ಉಭಯ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ಬ್ಯಾಂಕಾಕ್ ನಲ್ಲಿ ಸಭೆ ನಡೆಸಿದ್ದರು. ಉಭಯ ನಾಯಕರ ನಡುವಿನ ಮಾತಿಕತೆ ವಿಷಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೇತೃತ್ವ ವಹಿಸಿದ್ದರು ಎಂದು ಹೇಳಲಾಗುತ್ತಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com