
ಮುಂಬೈ: 1993ರ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ 1996ರಲ್ಲಿ ಬಂಧನಕೊಳ್ಳಗಾಗಿದ್ದ ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಮಾರ್ಚ್ ಮೊದಲ ವಾರದಲ್ಲಿ ಜೈಲಿನಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮಂಗಳವಾರ ಅಧಿಕೃತ ಮೂಲಗಳು ತಿಳಿಸಿವೆ.
42 ತಿಂಗಳು ಜೈಲು ಶಿಕ್ಷೆಗೆ ಗುರಿಯಾಗಿರುವ ಸಂಜಯ್ ದತ್ ಅವರು ಈಗಾಗಲೇ ಪುಣೆಯ ಯರವಾಡ ಜೈಲಿನಲ್ಲಿ 18 ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದು, ಸನ್ನಡತೆ ಆಧಾರದ ಮೇಲೆ ಆರು ತಿಂಗಳು ಮೊದಲೇ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ನಿಗದಿತ ಅವಧಿ ಪ್ರಕಾರ, 2013ರ ಮೇನಿಂದ ಆರಂಭವಾದ ಸಂಜಯ್ ದತ್ ಅವರ 42 ತಿಂಗಳ ಜೈಲು ಶಿಕ್ಷೆ ಮುಂದಿನ ವರ್ಷದ ನವೆಂಬರ್‌ನಲ್ಲಿ ಕೊನೆಗೊಳ್ಳಬೇಕಿದೆ.
ಅಪರಾಧಿಯು ತನ್ನ ಜೈಲು ಶಿಕ್ಷೆ ವೇಳೆ ಉತ್ತಮ ನಡತೆ ತೋರಿದರೆ ಅಂಥ ಖೈದಿಗೆ 114 ದಿನಗಳು ಶಿಕ್ಷೆ ಕಡಿಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸಂಜಯ್ ದತ್ ಅವರ ಎಲ್ಲ ದಾಖಲೆಗಳನ್ನು ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
Advertisement