
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇನಾಪಡೆ ಮಂಗಳವಾರ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ.
ಪ್ಯಾಂಪೊರೆಯಿಂದ 12 ಕಿ.ಮೀ ದೂರದಲ್ಲಿ ಪಿಕ್‌ಅಪ್ ವಾಹನದಲ್ಲಿ ತೆರಳುತ್ತಿದ್ದ ಉಗ್ರರು, ವಾಹನ ನಿಲ್ಲಿಸಲು ಸೂಚಿಸಿದ ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದ ಸೇನಾಪಡೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅನಂತನಾಗ್ ಜಿಲ್ಲೆಯಿಂದ ಶ್ರೀನಗರಕ್ಕೆ ಕೆಲವು ಉಗ್ರರು ಪ್ರಯಾಣ ಮಾಡುತ್ತಿದ್ದಾರೆ ಎಂಬಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆ ಪ್ಯಾಂಪೊರೆ ಪ್ರದೇಶದ ಸೆಂಪೊರಾದಲ್ಲಿ ತಾತ್ಕಾಲಿಕ ಚೆಕ್‌ಪೋಸ್ಟ್ ತೆರೆದಿತ್ತು.
Advertisement