ಹೇಡಿಗಳಾದ ಸೋನಿಯಾ ಮತ್ತು ರಾಹುಲ್ ತಿಹಾರ್ ಜೈಲಿಗೆ ಹೋಗಲಿದ್ದಾರೆ: ಸುಬ್ರಮಣಿಯನ್ ಸ್ವಾಮಿ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ತಿಹಾರ್ ಜೈಲಿಗೆ ಹೋಗುವುದು ಖಚಿತ ಎಂದು ಹೇಳಿದ್ದಾರೆ.
ಸುಬ್ರಮಣಿಯಮ್ ಸ್ವಾಮಿ
ಸುಬ್ರಮಣಿಯಮ್ ಸ್ವಾಮಿ
Updated on: 

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ತಮಗೆ ಜಯ ದೊರಕುವುದು ಖಚಿತ ಎಂದಿರುವ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ತಿಹಾರ್ ಜೈಲಿಗೆ ಹೋಗುವುದು ಖಚಿತ ಎಂದು ಹೇಳಿದ್ದಾರೆ.

ನನ್ನ ಲೆಕ್ಕಾಚಾರ ಸರಿಯಾಗಿದ್ದು, ನ್ಯಾಷನಲ್ ಹೆರಾಲ್ಡ್ ಕೇಸ್ ಶೀಘ್ರವೇ ಕ್ಲೋಸ್ ಆಗಲಿದ್ದು, ಅವರಿಬ್ಬರು ಜೈಲಿಗೆ ಹೋಗುವುದು ಶತಃಸಿದ್ದ ಎಂದು ಖಾಸಗಿ ಚಾನೆಲ್ ವೊಂದರ ಸಂದರ್ಶದನಲ್ಲಿ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಕಾಂಗ್ರೆಸ್ ನ ಎಲ್ಲಾ ನಾಯಕರು ಜೋಕರ್ ಗಳು ಎಂದಿರುವ ಸುಬ್ರಮಣಿಯನ್ ಸ್ವಾಮಿ, ನ್ಯಾಯಾಲಯದಿಂದ ರಾಹುಲ್ ಮತ್ತು ಸೋನಿಯಾ ಗಾಂಧಿಗೆ ರಿಲೀಫ್ ಸಿಕ್ಕಿದೆ ಎಂದು ಹೇಳುತ್ತಿರುವ ಕಾಂಗ್ರೆಸ್ ನಾಯಕರು ಜನತೆಯನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನ್ಯಾಯಾಲಯಕ್ಕೆ ಹಾಜರಾಗಿದ್ದ ಸೋನಿಯಾ ಮತ್ತು ರಾಹುಲ್ ಗಾಂಧಿ ಒಂದು ವೇಳೆ ಜಾಮೀನಿಗೆ ಅರ್ಜಿ ಸಲ್ಲಿಸಿದರೇ, ಪಾಸ್ ಪೋರ್ಟ್ ಅನ್ನು ಸೀಜ್ ಮಾಡುವಂತೆ ತಾವು ಕೋರ್ಟ್ ಗೆ ಮನವಿ ಮಾಡುವುದಾಗಿ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com