ಬದೌನ್: 13 ವರ್ಷದ ಬಾಲಕಿಯನ್ನು ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಫೈಜ್ ಗಂಜ್ ನಲ್ಲಿ ನಡೆದಿದೆ.
ಕಳೆದ ರಾತ್ರಿ ಈ ಘಟನೆ ನಡೆದಿದ್ದು, 15 ವರ್ಷದ ಅಪ್ರಾಪ್ತ ಆ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ್ದಾನೆ. ನಂತರ ಮನೆಗೆ ಬಂದ ಬಾಲಕಿ ಪೋಷಕರಿಗೆ ನಡೆದ ಘಟನೆ ಬಗ್ಗೆ ವಿವರಿಸಿದ್ದಾಳೆ.
ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದಾರೆ. ಅಪ್ರಾಪ್ತನ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಆರೋಪಿಯು ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.