ದೇಶ

ಸೋನಿಯಾ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಹಾರೈಕೆ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಶುಭ ಹಾರೈಸಿದ್ದಾರೆ...

ಸೋನಿಯಾ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಹಾರೈಕೆ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Published On :

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಶುಭ ಹಾರೈಸಿದ್ದಾರೆ.

ಈ ಕುರಿತಂತೆ ಟ್ವಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಮೋದಿ ಅವರು, ಸೋನಿಯಾ ಗಾಂಧಿವರಿಗೆ ಹುಟ್ಟುಹಬ್ಬ ಶುಭಶಯ ಎಂದು ಹೇಳಿದ್ದಾರೆ. ಸೋನಿಯಾ ಉತ್ತಮ ಆರೋಗ್ಯದೊಂದಿಗೆ ಸುಧೀರ್ಘವಾಗಿ ಜೀವನ ಸಾಗಿಸಲಿ ಎಂದು ಹಾರೈಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣದಲ್ಲಿ ಈಗಾಗಲೇ ಸಂಕಷ್ಟದಲ್ಲಿರುವ ಸೋನಿಯಾಗಾಂಧಿ ಅವರು ನಿನ್ನೆಯಷ್ಟೇ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ್ದರು. ಪ್ರಕರಣದ ತೀರ್ಪು ನೀಡುವ ವಿಚಾರ ನ್ಯಾಯಧೀಶರಿಗೆ ಸಂಬಂಧಪಟ್ಟಿದ್ದು, ಹೀಗಾಗಿ ನಾನೇಕೆ ಇಂತಹ ವಿಚಾರಕ್ಕೆ ಹೆದರಬೇಕು. ನನ್ನ ವಿರುದ್ಧ ಬಿಜೆಪಿ ರಾಜಕೀಯ ಪಿತೂರಿ ರೂಪಿಸುತ್ತಿದೆ. ಇದಕ್ಕೆಲ್ಲ ನಾನು ಹೆದರುವುದಿಲ್ಲ. ನಾನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಸೊಸೆ ಎಂದು ಹೇಳಿದ್ದರು. ನಿನ್ನೆ ಸಂಸತ್ತಿನಲ್ಲಿ ನಡೆದ ಕಲಾಪದಲ್ಲಿ ಈ ವಿಚಾರ ಗದ್ದಲ ಎಬ್ಬಿಸಿತ್ತು. ಅಲ್ಲದೆ, ಕಲಾಪ ನಡೆದಿರಲಿಲ್ಲ.

ಸದ್ಯ ಪ್ರಕಟಣೆ ನಿಲ್ಲಿಸಿರುವ ನ್ಯಾಷನಲ್‌ ಹೆರಾಲ್ಡ್‌ ಕಂಪನಿಗೆ ದೇಶದ ವಿವಿಧೆಡೆ 2000 ಕೋಟಿ ರೂ. ಬೆಲೆಬಾಳುವ ಭೂಮಿ ಇದೆ. ಇದನ್ನು ಕಬಳಿಸಲು ಸೋನಿಯಾ, ರಾಹುಲ್‌ ಅವ್ಯವಹಾರ ನಡೆಸಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ಸೋನಿಯಾ ಹಾಗೂ ರಾಹುಲ್‌ಗೆ 2014ರಲ್ಲಿ ದೆಹಲಿ ವಿಚಾರಣಾಧೀನ ಕೋರ್ಟ್‌ ಸಮನ್ಸ್‌ ಕೂಡ ಜಾರಿ ಮಾಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.