

ನವದೆಹಲಿ: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧದ ನ್ಯಾಷನಲ್ ಹೆರಾಲ್ಡ್ ಪ್ರಕರಣದಿಂದ ಸಂಸತ್ ಕಲಾಪ ವ್ಯರ್ಥವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ, "ರಾಣಿ" ಕಾನೂನಿಗೆ ಉತ್ತರದಾಯಿಯಲ್ಲ ಎಂಬುದನ್ನು ಭಾರತ ಎಂದಿಗೂ ಒಪ್ಪಿಲ್ಲ ಎಂದು ಪರೋಕ್ಷವಾಗಿ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾನೂನಿಗೆ ಅತೀತರಾದವರು ಯಾರೂ ಇಲ್ಲ, ಸಂಸತ್ ನಲ್ಲಿ ಗದ್ದಲ ಉಂಟು ಮಾಡುವ ಬದಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಕಾನೂನಾತ್ಮಕವಾಗಿ ಎದುರಿಸಲಿ ಎಂದು ಜೇಟ್ಲಿ ಸಲಹೆ ನೀಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಹಗೆತನ ಸಾಧಿಸುತ್ತಿದೆ ಎಂಬ ಕಾಂಗ್ರೆಸ್ ನ ಆರೋಪವನ್ನು ತಳ್ಳಿಹಾಕಿರುವ ಅರುಣ್ ಜೇಟ್ಲಿ, ಕೇಂದ್ರ ಸರ್ಕಾರ ಈ ವರೆಗೂ ದಂಡನಾತ್ಮಕ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವರಿಗೆ ಸರ್ಕಾರವಾಗಲಿ ಸಂತ್ ಆಗಲಿ ಯಾವುದೇ ರೀತಿ ಸಹಾಯ ಮಾಡಲು ಸಾಧ್ಯವಿಲ್ಲ, ಆದ್ದರಿಂದ ಅವರು ಸಂಸತ್ ನಲ್ಲಿ ಏಕೆ ಗದ್ದಲ ಉಂಟುಮಾಡಬೇಕು ಎಂದು ಜೇಟ್ಲಿ ಪ್ರಶ್ನಿಸಿದ್ದಾರೆ.