
ನವದೆಹಲಿ: ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಸಮಸ್ಯೆ ತಡೆಗಟ್ಟಲು ದೆಹಲಿ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿದ್ದ ಸಮ-ಬೆಸ ಸಂಖ್ಯೆ ವಾಹನ ಸಂಚಾರ ಸೂತ್ರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದೆ.
ಸರ್ಕಾರದ ಈ ನೀತಿಯಿಂದಾಗಿ ಜನರು ಎರಡೆರಡು ಕಾರುಗಳನ್ನು ಖರೀದಿಸುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ವಾಯು ಮಾಲಿನ್ಯ ಸಮಸ್ಯೆ ನಿವಾರಣೆಯಾಗುವ ಬದಲು ಹೆಚ್ಚಾಗುವ ಸಾಧ್ಯತೆಯೇ ಜಾಸ್ತಿ ಇದೆ ಎಂದು ಎನ್ ಜಿಟಿ ಕಳವಳ ವ್ಯಕ್ತಪಡಿಸಿದೆ.
ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬಳಕೆಗಾಗಿ ಹೊಸದಾಗಿ ಡಿಸೆಲ್ ವಾಹನಗಳನ್ನು ಖರೀದಿಸಬಾರದೆಂದು ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಎನ್ ಜಿ ಟಿ ಸೂಚನೆ ನೀಡಿದೆ.
Advertisement