ಶಬ್ದ, ವಾಯುಮಾಲಿನ್ಯ ತಡೆಗೆ ಕ್ರಮ ಕೈಗೊಳ್ಳಲು ಹಿಮಾಚಲ ಪ್ರದೇಶ ಸರ್ಕಾರಕ್ಕೆ ಎನ್ ಜಿ ಟಿ ಸೂಚನೆ

ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ ಜಿ ಟಿ ) ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಿದೆ.
ವಾಯುಮಾಲಿನ್ಯ(ಸಂಗ್ರಹ ಚಿತ್ರ)
ವಾಯುಮಾಲಿನ್ಯ(ಸಂಗ್ರಹ ಚಿತ್ರ)

ಶಿಮ್ಲಾ: ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಿದೆ.
ಹಿಮಾಚಲ ಪ್ರದೇಶ ರಾಜಧಾನಿ ಶಿಮ್ಲಾದ ಪ್ರಮುಖ ರಸ್ತೆಗಳಲ್ಲಿ ವಾಯುಮಾಲಿನ್ಯ ಉಂಟು ಮಾಡುವ ವಾಹನಗಳಿಗೆ ರೂ. 500 ಗ್ರೀನ್ ಟ್ಯಾಕ್ಸ್(ಹಸಿರು ತೆರಿಗೆ) ವಿಧಿಸಲು ಸರ್ಕಾರ ತೀರ್ಮಾನಿಸಿದೆ. ತೆರಿಗೆ ವಿಧಿಸುವುದರೊಂದಿಗೆ ಶಿಮ್ಲಾದ ಕಾರಟ್ ರಸ್ತೆಯಲ್ಲಿ ಒನ್ ವೇ ಟ್ರಾಫಿಕ್ ನಿಯಮ ಜಾರಿಗೆ ತರಲು ಸರ್ಕಾರಕ್ಕೆ ಹಸಿರು ನ್ಯಾಯಮಂಡಳಿ ಸಲಹೆ ನೀಡಿದೆ.
ಶಿಮ್ಲಾದ ವಾತಾವರಣ ಹದಗೆಟ್ಟು, ಆರೋಗ್ಯ ಸಮಸ್ಯೆಗಳು ಪ್ರಾರಂಭವಾಗುವುದಕ್ಕು ಮುನ್ನ ವಾಯುಮಾಲಿನ್ಯ, ಶಬ್ದ ಮಾಲಿನ್ಯ ತಡೆಗಟ್ಟಲು ಅತಿ ಶೀಘ್ರವೇ ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹಸಿರು ನ್ಯಾಯಮಂಡಳಿ ಹೇಳಿದೆ. ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯೇ ವಾಯುಮಾಲಿನ್ಯಕ್ಕೆ ಕಾರಣ ಎಂದು ನ್ಯಾಯಮಂಡಳಿ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com