
ನವದೆಹಲಿ: ದೆಹಲಿಯ ಶಾಕೂರ್ ಬಸ್ತಿ ಕೊಳಗೇರಿ ತೆರವು ವಿವಾದ ಸಂಬಂಧ ದೆಹಲಿಯ ಆಪ್ ಸರ್ಕಾರದ ವಿರುದ್ಧ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ.
ರಾಹುಲ್ ಗಾಂಧಿ ಇನ್ನೂ ಮಗು ಇದ್ದಂತೆ, ರೈಲ್ವೆ ಇಲಾಖೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ನಿರ್ವಹಿಸುತ್ತದೆ ಎಂದು ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿಗೆ ಹೇಳಿಕೊಟ್ಟಿಲ್ಲ ಎಂದು ನನಗೆ ಅನ್ನಿಸುತ್ತಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ದೆಹಲಿಯಲ್ಲಿ ಆಪ್ ಸರ್ಕಾರ ಆಡಳಿತದಲ್ಲಿದೆ, ಹೀಗಿದ್ದೂ ಎಎಪಿ ಯಾಕೆ ಪ್ರತಿಭಟನೆ ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದರು.
ರೈಲ್ವೆ ಇಲಾಖೆಯು ಶನಿವಾರ ಶಾಕುರ್ ಬಸ್ತಿ ಕೊಳಗೇರಿ ಪ್ರದೇಶವನ್ನು ತೆರವುಗೊಳಿಸಿದೆ. ಇದರಿಂದ ಇಲ್ಲಿ ವಾಸಿಸುತ್ತಿದ್ದ ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ತೆರವು ಕಾರ್ಯಾಚರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಗುವೊಂದು ಮೃತಪಟ್ಟ ಹಿನ್ನೆಲೆಯಲ್ಲಿ ವಿವಾದ ಭುಗಿಲೆದ್ದಿದ್ದು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ವಾಗ್ವಾದ ನಡೆಯುತ್ತಿದೆ.
Advertisement