ಪ್ರಧಾನಿ ಮೋದಿ ಕೇರಳ ಜನತೆಗೆ ಅವಮಾನ ಮಾಡಿದ್ದಾರೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕೇರಳ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ....
ರಾಹುಲ್ ಗಾಂಧಿ ಮತ್ತು ನರೇಂದ್ರ ಮೋದಿ
ರಾಹುಲ್ ಗಾಂಧಿ ಮತ್ತು ನರೇಂದ್ರ ಮೋದಿ
Updated on: 

ಪ್ರಧಾನಿ ನರೇಂದ್ರ ಮೋದಿ ಕೇರಳ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪ್ರಧಾನಿಯಾದ ನಂತರ ಮೊದಲ ಬಾರಿಗೆ ಕೇರಳಕ್ಕೆ ಭೇಟಿ ಮೋದಿ ಭೇಟಿ ನೀಡುತ್ತಿದ್ದು, ಈ ವೇಳೆ ಕಾರ್ಯಕ್ರಮಕ್ಕೆ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಬರದಂತೆ ನಿಷೇಧ ಹೇರಿರುವುದು ಸರಿಯಲ್ಲ, ಉಮ್ಮನ್ ಚಾಂಡಿ ಕೇರಳ ಮುಖ್ಯಮಂತ್ರಿ , ಅವರು ಕೇರಳದ ಜನತೆಯ ದನಿಯಾಗಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ.

ಕಾಂಗ್ರೆಸ್ ಮಾಜಿ ಮುಖಂಡ ಆರ್. ಶಂಕರ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ  ಉಮ್ಮನ್ ಚಾಂಡಿ ಹೆಸರಿದ್ದು, ಅವರು ಕಾರ್ಯಕ್ರಮಕ್ಕೆ ಬರದಂತೆ ಬಿಜೆಪಿ ನಾಯಕರು ಹೇಳಿದ್ದಾರೆ ಎಂದು ರಾಹುಲ್ ಗಾಂಧಿ  ಆರೋಪಿಸಿದ್ದಾರೆ.

ಎರಡು ದಿನಗಳ ಕಾಲ ಕೇರಳದಲ್ಲಿ ಇರುವ ಪ್ರಧಾನಿ ಮೋದಿ ಅವರನ್ನು, ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಉಮ್ಮನ್ ಚಾಂಡಿ ಸ್ವಾಗತಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com