ಕಲ್ಲಿದ್ದಲು ಹಗರಣದ ತನಿಖೆ ವಿಳಂಬಕ್ಕೆ 'ಸುಪ್ರೀಂ' ಅಸಮಾಧಾನ

ಬಹುಕೋಟಿ ಕಲ್ಲಿದ್ದಲು ಹಗರಣದ ತನಿಖೆಯಲ್ಲಿ ವಿಳಂಬವಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಸುಪ್ರೀಂ ಕೋರ್ಟ್(ಸಂಗ್ರಹ ಚಿತ್ರ)
ಸುಪ್ರೀಂ ಕೋರ್ಟ್(ಸಂಗ್ರಹ ಚಿತ್ರ)
Updated on: 

ನವದೆಹಲಿ: ಬಹುಕೋಟಿ ಕಲ್ಲಿದ್ದಲು ಹಗರಣದ ತನಿಖೆಯಲ್ಲಿ ವಿಳಂಬವಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ತನಿಖೆ ಪೂರ್ಣಗೊಳಿಸುವುದಕ್ಕೆ ವಿಧಿಸಿದ್ದ 2014 ರ ಡಿ.31 ರ ಗಡುವನ್ನು ಸಿಬಿಐಗೆ ನೆನಪಿಸಿರುವ ನ್ಯಾ. ಮದನ್ ಲೋಕುರ್, ನ್ಯಾ. ಕುರಿಯನ್ ಜೋಸೆಫ್, ನ್ಯಾ. ಎಕೆ ಸಿಕ್ರಿ ಅವರಿದ್ದ ಸುಪ್ರೀಂ ಕೋರ್ಟ್ ಪೀಠ,  ಹಗರಣದ ತನಿಖೆ ನಿಧಾನಗತಿಯಲ್ಲಿ ನಡೆಯಲು ಸಾಧ್ಯವಿಲ್ಲ. ಇದು ಮುಗಿಯದ ಕತೆಯಾಗಬಾರದು, ತನಿಖೆಯನ್ನು ಶೀಘ್ರವೇ ಪೂರ್ಣಗೊಳಿಸಿ ಎಂದು ಸಿಬಿಐ ಗೆ ಕಟ್ಟುನಿಟ್ಟಿನ ಆದೇಶ ನೀಡಿದೆ.  ತನಿಖೆ ಪೂರ್ಣಗೊಳಿಸುವುದಕ್ಕೆ ಅಗತ್ಯವಿದ್ದ ಸಮಯವನ್ನು ತೆಗೆದುಕೊಂಡಾಗಿದೆ. ತನಿಖೆ ವಿಳಂಬವಾಗಿ ನಡೆಯುತ್ತಿರುವುದಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದು, ಶೀಘ್ರವೇ ತನಿಖೆ ಪೂರ್ಣಗೊಳಿಸುವುದಕ್ಕೆ ಸೂಚಿಸಿದ್ದಾರೆ.
ಕಲ್ಲಿದ್ದಲು ಹಗರಣದ ತನಿಖೆಯ ಉಸ್ತುವಾರಿ ವಹಿಸಿಕೊಂಡಿರುವ ಅಧಿಕಾರಿ ಅಮರೇಂದ್ರ ಶರಣ್ ಅವರನ್ನು ರಾಷ್ಟ್ರೀಯ ರಕ್ಷಣಾ ಕಾಲೇಜ್ ಗೆ ನೇಮಕ ಮಾಡಿರುವ ಹಿನ್ನೆಲೆಯಲ್ಲಿ  ವರ್ಗಾವಣೆಗೊಳಿಸಲು ಸಿಬಿಐ ಕೋರ್ಟ್, ಅನುಮತಿ ಕೇಳಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಕ್ರಮಗಳಿಂದ ತನಿಖೆ ವೇಗ ಮತ್ತಷ್ಟು ಕಡಿಮೆಯಾಗಲಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com