ಲೋಕಸಭೆಯಲ್ಲಿ 'ಗಾಂಧಿಗಿರಿ': ಬಿಜೆಪಿಯಿಂದ ಪ್ರತಿಭಟನಾನಿರತ 'ಕೈ'ಗೆ ಗುಲಾಬಿ ಹೂವು
ನವದೆಹಲಿ: ಲೋಕಸಭೆಯಲ್ಲಿ ಪಂಜಾಬ್‌ನ ದಲಿತ ಯುವಕರ ಮೇಲಿನ ದೌರ್ಜನ್ಯ ಖಂಡಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರಿಗೆ ಆಡಳಿತರೂಢ ಬಿಜೆಪಿಯ ಕೆಲವು ಸದಸ್ಯರು ಗುಲಾಬಿ ಹೂವು ನೀಡಿ, ಅವರನ್ನು ಮನವೊಲಿಸುವ ಯತ್ನ ನಡೆಸಿದರು.
ಪಂಜಾಬ್ ದಲಿತ ಯುವಕರ ಮೇಲಿನ ದೌರ್ಜನ್ಯದ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಮತ್ತು ಪ್ರಶ್ನೋತ್ತರ ಅವಧಿಯನ್ನು ಮುಂದೂಡಬೇಕು ಎಂಬ ಕಾಂಗ್ರೆಸ್ ಮನವಿಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ತಿರಸ್ಕರಿಸಿದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹಾಗೂ ಪಂಜಾಬ್ ಎಸ್‌ಎಡಿ-ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಈ ವೇಳೆ ಆರು ಬಿಜೆಪಿ ಸಂಸದರು ಪ್ರತಿಭಟನಾ ನಿರತ ಕಾಂಗ್ರೆಸ್ ಸಂಸದರ ಬಳಿ ತೆರಳಿ ಗುಲಾಬಿ ಹೂವು ನೀಡಿ, ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು.
ದಲಿತ ವಿವಾದ ಪ್ರಮುಖ ವಿಷಯವಾಗಿದ್ದು, ನಮ್ಮ ಪಕ್ಷ ಈ ವಿಷಯ ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಲೋಕಸಭಾ ಕಾಂಗ್ರೆಸ್ ನಾಯಕ ಮಲಿಕಾರ್ಜುನ್ ಖರ್ಗೆ ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ