ಪ್ರಧಾನಿ ಮೋದಿ, ರಾಷ್ಟ್ರಪತಿಗಳನ್ನು ಭೇಟಿ ಮಾಡಲಿರುವ ಗೂಗಲ್ ಸಿಇಒ ಸುಂದರ್ ಪಿಚ್ಚೈ

ಡಿ.16 ರಿಂದ ಭಾರತ ಪ್ರವಾಸ ಕೈಗೊಂಡಿರುವ ಗೂಗಲ್ ಸಿಇಒ ಸುಂದರ್ ಪಿಚ್ಚೈ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಲಿದ್ದಾರೆ.
ಸುಂದರ್ ಪಿಚ್ಚೈ
ಸುಂದರ್ ಪಿಚ್ಚೈ

ನವದೆಹಲಿ: ಗೂಗಲ್ ಸಿಇಒ ಸುಂದರ್ ಪಿಚ್ಚೈ ಡಿ.16 - 17 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಲಿದ್ದಾರೆ.
ಸುಂದರ್ ಪಿಚ್ಚೈ ಗೂಗಲ್ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದು ಹೊಸ ಯೋಜನೆಗಳು ಬಿಡುಗಡೆಯಾಗುವ ಬಗ್ಗೆ ನಿರೀಕ್ಷೆ ಇದೆ. ಸುಂದರ್ ಪಿಚ್ಚೈ ಭಾರತದ ಗೂಗಲ್ ನೌಕರರನ್ನು ಸಹ ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಗೂಗಲ್ ನೌಕರರ ಭೇಟಿ ನಂತರ ಕೇಂದ್ರ ಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಭೇಟಿ ಮಾಡಲಿದ್ದಾರೆ. ಇದರೊಂದಿಗೆ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲಿದ್ದು ನಂತರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಆಯೋಜಿಸಿರುವ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ತಮ್ಮ ಇತ್ತೀಚೆಗಿನ ಅಮೆರಿಕ ಭೇಟಿಯಲ್ಲಿ ಸುಂದರ್ ಪಿಚ್ಚೈ ಅವರನ್ನು ಭೇಟಿ ಮಾಡಿದ್ದರು. ಈ ಭೇಟಿ ವೇಳೆ ಭಾರತದಾದ್ಯಂತ ಸುಮಾರು 400 ಸ್ಟೇಷನ್ ಗಳಲ್ಲಿ ವೈಫೈ ಸೌಲಭ್ಯ ಒದಗಿಸಲು ಭಾರತದ ದೂರಸಂಪರ್ಕ, ರೈಲ್ವೆ ಇಲಾಖೆ, ರೈಲ್ ಟೆಲ್ ಗೂಗಲ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದವು. 2014 ರ ಸೆಪ್ಟೆಂಬರ್ ನಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಸುಂದರ್ ಪಿಚ್ಚೈ, ಗೂಗಲ್ ನ ಆಂಡ್ರಾಯ್ಡ್ ಒನ್ ಆಪರೇಟಿಂಗ್ ಸಿಸ್ಟಂ ನ್ನು ಬಿಡುಗಡೆ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com