ಸಕಾರಾತ್ಮಕ ದ್ವಿಪಕ್ಷೀಯ ಸಂಬಂಧದ ಬಗ್ಗೆ ಆತಂಕ: ಪಾಕ್ ರಾಯಭಾರ ಕಚೇರಿಯಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಸಭೆ

ಇತ್ತೀಚಿನ ದಿನಗಳಲ್ಲಿ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಸಕಾರಾತ್ಮಕ ದಿಕ್ಕಿನಲ್ಲಿ ನಡೆಯುತ್ತಿರುವ ಸೂಚನೆಗಳಿಂದ ಕಾಶ್ಮೀರಿ ಪ್ರತ್ಯೇಕತಾವಾದಿಗಳಲ್ಲಿ ಆತಂಕ ಮೂಡಿರುವುದು ಸ್ಪಷ್ಟವಾಗಿದೆ.
ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಸಯೀದ್ ಶಾ ಗಿಲಾನಿ(ಸಂಗ್ರಹ ಚಿತ್ರ)
ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಸಯೀದ್ ಶಾ ಗಿಲಾನಿ(ಸಂಗ್ರಹ ಚಿತ್ರ)

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಸಕಾರಾತ್ಮಕ ದಿಕ್ಕಿನಲ್ಲಿ ನಡೆಯುತ್ತಿರುವ ಸೂಚನೆಗಳಿಂದ ಕಾಶ್ಮೀರಿ ಪ್ರತ್ಯೇಕತಾವಾದಿಗಳಲ್ಲಿ ಆತಂಕ ಮೂಡಿರುವುದು ಸ್ಪಷ್ಟವಾಗಿದೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನದ ಭೇಟಿ ಬಗ್ಗೆ ಚರ್ಚಿಸಲು ಕಾಶ್ಮೀರಿ ಪ್ರತ್ಯೇಕತಾವಾದಿ ಹುರಿಯತ್ ಕಾನ್ಫರೆನ್ಸ್ ನ ನಾಯಕರು ಭಾರತದಲ್ಲಿರುವ ಪಾಕ್ ನ ರಾಯಭಾರಿ(ಹೈಕಮಿಷನರ್) ಅಬ್ದುಲ್ ಬಸಿತ್ ಅವರನ್ನು ಭೇಟಿ ಮಾಡಿದ್ದು, ದ್ವಿಪಕ್ಷೀಯ ಮಾತುಕತೆಯಲ್ಲಿ ಪ್ರಸ್ತಾಪವಾದ ಅಂಶಗಳ ಬಗ್ಗೆ ಚರ್ಚಿಸಿದ್ದಾರೆ.  ಪ್ರತ್ಯೇಕತಾವಾದಿಗಳಾದ ಪೀರ್ ಸೈಫುಲ್ಲಾ, ಅಲ್ತಫ್ ಅಹ್ಮದ್ ಶಾ, ಅಬ್ದುಲ್ ಬಸಿತ್ ಜೊತೆ ಸಭೆ ನಡೆಸಿದ್ದು, ಕಾಶ್ಮೀರ ವಿಷಯದಲ್ಲಿ ಪಾಕಿಸ್ತಾನ ತನ್ನ ಸ್ಥಿರತೆಯನ್ನು ಕಾಯ್ದುಕೊಳ್ಳಬೇಕು ಎಂದು ಹೇಳಿರುವ ಪ್ರತ್ಯೇಕತಾವಾದಿ ನಾಯಕ ಸಯೀದ್ ಅಲಿ ಗಿಲಾನಿ ಸಂದೇಶವನ್ನು ಪಾಕ್ ಹೈಕಮಿಷನರ್ ಗೆ ತಲುಪಿಸಿದ್ದಾರೆ.
ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯದ ಎದುರು ಪ್ರಮುಖ ವಿಷಯವನ್ನಾಗಿಸುವುದರಲ್ಲಿ ಅಬ್ದುಲ್ ಬಸಿತ್ ಪ್ರಮುಖ ಪಾತ್ರ ವಹಿಸಬೇಕೆಂದು ಕಾಶ್ಮೀರಿ ಪ್ರತ್ಯೆಕತಾವಾದಿಗಳು ಸಭೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com