ಆಪ್ ವಿದೇಶಿ ದೇಣಿಗೆ ಬಗ್ಗೆ ತನಿಖೆ ನಡೆಸಲು ಆಗ್ರಹಿಸಿದ್ದ ಪಿಐಎಲ್ ವಜಾ

ಆಮ್ ಆದ್ಮಿ ಪಕ್ಷ ಸ್ವೀಕರಿಸಿರುವ ವಿದೇಶಿ ದೇಣಿಗೆ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಮನವಿ ಮಾಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಆಮ್ ಆದ್ಮಿ ಪಕ್ಷ
ಆಮ್ ಆದ್ಮಿ ಪಕ್ಷ

ನವದೆಹಲಿ: ಆಮ್ ಆದ್ಮಿ ಪಕ್ಷ ಸ್ವೀಕರಿಸಿರುವ ವಿದೇಶಿ ದೇಣಿಗೆ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಮನವಿ ಮಾಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘಿಸಿ ಆಮ್ ಆದ್ಮಿ ಪಕ್ಷ ವಿದೇಶದಿಂದ ದೇಣಿಗೆ ಸ್ವೀಕರಿಸುತ್ತಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್ ಗೆ ಎಂಎಲ್ ಶರ್ಮಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಕೋರ್ಟ್ ಗೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸರ್ಕಾರ ಈ ಹಿಂದಿನ ಸರ್ಕಾರ ಆಪ್ ವಿರುದ್ಧ ತನಿಖೆ ನಡೆಸಿದ್ದು ದೇಣಿಗೆ ಸ್ವೀಕರಿಸಿರುವುದರಲ್ಲಿ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆಯಾಗಿಲ್ಲ ಎಂದು ಹೇಳಿತ್ತು.    
ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬೆಂಬಲ ನೀಡುವಂತೆ ದುಬೈ ಹಾಗೂ ಇತರ ರಾಷ್ಟ್ರಗಳಿಂದ ಮುಸ್ಲಿಂ ಸಮುದಾಯಕ್ಕೆ ಕರೆ ಬರುತ್ತಿದ್ದು, ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಅಡ್ವೊಕೇಟ್ ಶಾಂತಿ ಭೂಷಣ್ ಅವರ ಹೆಸರನ್ನು ಪ್ರಸ್ತಾಪಿಸಿದ್ದ ಎಂಎಲ್ ಶರ್ಮಾ, ಹಲವು ವಿದೇಶಿ ಕಂಪನಿಗಳು ಹಾಗೂ ಟ್ರಸ್ಟ್ ಗಳಿಂದ ಆಪ್ ನಾಯಕರು ಅಕ್ರಮವಾಗಿ ದೇಣಿಗೆ ಸ್ವೀಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com