

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿದೆ.
ಈ ಇಬ್ಬರು ನ್ಯಾಯಾಲಯಕ್ಕೆ ಹಾಜರಾಗಲು ಇನ್ನು ಒಂದೇ ದಿನ ಬಾಕಿಯಿದ್ದು, ಸೋನಿಯಾ ಮತ್ತು ರಾಹುಲ್ ಗೆ ಜೈಲೋ ಅಥವಾ ಬೇಲೋ ಎಂಬುದು ಬಹುದೊಡ್ಡ ಪ್ರಶ್ನೆಯಾಗಿದೆ.
ಪ್ರಕರಣ ಸಂಬಂಧ ಯಾವ ರೀತಿಯ ತಂತ್ರಗಾರಿಕೆ ಅನುಸರಿಸಬೇಕು ಎಂಬುದರ ಬಗ್ಗೆ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಿರಂತರ ಸಭೆಗಳು ನಡೆಯುತ್ತಿವೆ. ಈ ಮಧ್ಯೆ ಜಾಮೀನಿಗೆ ಅರ್ಜಿ ಸಲ್ಲಿಸುವ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸೋನಿಯಾ ಗಾಂಧಿ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸೇರಿದಂತೆ ಐವರಿಗೆ ಸಮನ್ಸ್ ನೀಡಿರುವ ಕೋರ್ಟ್ ಡಿಸೆಂಬರ್ 19 ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ.