

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹೆದರುತ್ತಿರುವುದು ಏಕೆ? ಎಂದು ಬಿಜೆಪಿ ನಾಯಕ ಹಾಗೂ ದೂರುದಾರ ಸುಬ್ರಮಣ್ಯನ್ ಸ್ವಾಮಿ ಅವರು ಶನಿವಾರ ಪ್ರಶ್ನಿಸಿದ್ದಾರೆ.
ಸೋನಿಯಾ, ರಾಹುಲ್ ಪಟಿಯಾಲ ಹೌಸ್ ಕೋರ್ಟ್‌ಗೆ ಹಾಜರಾಗುವ ಮುನ್ನ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸ್ವಾಮಿ, ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.
ಬಿಜೆಪಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ ಸ್ವಾಮಿ, ನಾನು ಗಾಂಧಿ ಕುಟುಂಬದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದೇನೆ. ರಾಜಕೀಯ ಹೋರಾಟ ಅಲ್ಲ ಎಂದರು.
ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಿದ್ದು, ಕಾಂಗ್ರೆಸ್ ನಾಯಕರು ಬೀದಿಯಲ್ಲಿ ಹೋರಾಟ ಮಾಡುವ ಬದಲು ಕಾನೂನು ಹೋರಾಟ ಎದುರಿಸಲಿ ಎಂದು ಹೇಳಿದ್ದಾರೆ.