ಸುಪ್ರೀಂ ಕೋರ್ಟ್
ದೇಶ
ನಿರ್ಭಯಾ ಪ್ರಕರಣದ ಬಾಲಾಪರಾಧಿ ಬಿಡುಗಡೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಡಿ.21 ಕ್ಕೆ
ನಿರ್ಭಯಾ ಪ್ರಕರಣದ ಅತ್ಯಾಚಾರಿ ಬಾಲಾಪರಾಧಿಯನ್ನು ಬಿಡುಗಡೆಗೊಳಿಸುತ್ತಿರುವುದನ್ನು ವಿರೋಧಿಸಿ ದೆಹಲಿ ಮಹಿಳಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಡಿ.21 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ನವದೆಹಲಿ: ನಿರ್ಭಯಾ ಪ್ರಕರಣದ ಅತ್ಯಾಚಾರಿ ಬಾಲಾಪರಾಧಿಯನ್ನು ಬಿಡುಗಡೆಗೊಳಿಸುತ್ತಿರುವುದನ್ನು ವಿರೋಧಿಸಿ ದೆಹಲಿ ಮಹಿಳಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಡಿ.21 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್, ಶನಿವಾರ ತಡರಾತ್ರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಮಧ್ಯರಾತ್ರಿ 1.30ರ ಸುಮಾರಿಗೆ ಅರ್ಜಿ ಪರಿಶೀಲಿಸಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಜಾ ಪೀಠದ ನ್ಯಾಯಮೂರ್ತಿಗಳಾದ ಎ.ಕೆ ಗೋಯಲ್, ಯು ಯು ಲಲಿತ್ ಅವರನ್ನೊಳಗೊಂಡ ಪೀಠ, ಡಿ.21ರಂದು ವಿಚಾರಣೆ ನಡೆಸಲಿದೆ ಎಂದು ಹೇಳಿದ್ದಾರೆ.
ನಿರ್ಭಯಾ ಪ್ರಕರಣದ ಬಾಲಾಪರಾಧಿಯನ್ನು ಬಿಡುಗಡೆ ಮಾಡುತ್ತಿರುವ ನಡೆಯ ಬಗ್ಗೆ ಸಮಾಜದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಬಾಲಾಪರಾಧಿಗೆ ಜೀವ ಬೆದರಿಕೆ ಇರುವುದರಿಂದ ಆತನನ್ನು ಗೌಪ್ಯ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ