
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮಹಾಮೈತ್ರಿಕೂಟ ರಚನೆಯ ಕಾರ್ಯತಂತ್ರ ಯಶಸ್ವಿಯಾಗಿರುವುದರಿಂದ 2016 ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲೂ ಇದೇ ಮಾದರಿಯ ಕಾರ್ಯತಂತ್ರ ರೂಪುಗೊಳ್ಳುವ ಸಾಧ್ಯತೆ ಇದೆ.
ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಯತ್ನಿಸುತ್ತಿರುವ ನಿತೀಶ್ ಕುಮಾರ್, ಜೆಡಿಯು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ವಿಷಯದ ಬಗ್ಗೆ ಪ್ರಸ್ತಾಪಿಸಿದ್ದು, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಪುದುಚೇರಿಯಲ್ಲಿ ಮುಂಬರುವ ವಿಧಾನಸಭೆಯಲ್ಲಿ ಬಿಜೆಪಿ ವಿರುದ್ಧ ಬಿಹಾರ ಮಾದರಿಯ ಮಹಾಮೈತ್ರಿಕೂಟ ರಚನೆ ಕಾರ್ಯತಂತ್ರ ರೂಪಿಸುವಂತೆ ಕರೆ ನೀಡಿದ್ದಾರೆ.
ಎನ್ ಡಿಎ ಸರ್ಕಾರದ ವಿರುದ್ಧ ಕಾರ್ಯತಂತ್ರ ರೂಪಿಸಲು ಜೆಡಿಯು ಈಗ ಸಮಾನಮನಸ್ಕರನ್ನು ಆಹ್ವಾನಿಸುತ್ತಿದ್ದು, ಬಿಹಾರ ಮಾದರಿಯ ಮಹಾಮೈತ್ರಿಕೂಟ ವನ್ನು ದೇಶಾದ್ಯಂತ ಪ್ರಯೋಗಿಸಲು ಸಜ್ಜಾಗುವ ಸೂಚನೆ ಇದೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಜೆಡಿಯು ಪಕ್ಷದ ಚಿಹ್ನೆಯನ್ನು ಬದಲಾಯಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಲು ಸಹ ನಿರ್ಧರಿಸಲಾಗಿದೆ ಎಂದು ಜೆಡಿಯು ನಾಯಕ ಕೆಸಿ ತ್ಯಾಗಿ ಹೇಳಿದ್ದಾರೆ.
Advertisement