
ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಇತರ ಐವರು ಎಎಪಿ ನಾಯಕರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಅರವಿಂದ್ ಕೇಜ್ರಿವಾಲ್, ಕುಮಾರ್ ವಿಶ್ವಾಸ್, ರಾಘವ್ ಚಢ, ಆಶುತೋಷ್, ಸಂಜಯ್ ಸಿಂಗ್ ಹಾಗೂ ದೀಪಕ್ ಬಾಜ್ಪೇಯಿ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 5ರೊಳಗೆ ಉತ್ತರಿಸುವಂತೆ ಹೈಕೋರ್ಟ್ ಸೂಚಿಸಿದೆ.
ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ) ಜೇಟ್ಲಿ ಅವರು ಭಾರಿ ಹಗರಣ ನಡೆಸಿದ್ದಾರೆ ಎಂದು ಕೇಜ್ರಿವಾಲ್ ಹಾಗೂ ಎಎಪಿ ನಾಯಕರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದ ಜೇಟ್ಲಿ, 10 ಕೋಟಿ ರುಪಾಯಿ ಪರಿಹಾರ ಕೋರಿದ್ದರು.
200ರಿಂದ 2013ರವರೆಗೆ 13 ವರ್ಷಗಳ ಕಾಲ ಜೇಟ್ಲಿ ಅವರು ಡಿಡಿಸಿಎ ಮುಖ್ಯಸ್ಥರಾಗಿದ್ದರು.
Advertisement