
ನವದೆಹಲಿ: ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳಿಗೆ(ಇಎಸ್‍ಎ) ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್‍ನಲ್ಲಿ ಕೇಂದ್ರ ಸರ್ಕಾರ ಪರಿಷ್ಕೃತ ಕರಡು ಅಧಿಸೂಚನೆ ಹೊರಡಿಸಿದ್ದು, ಸಂಬಂಧಿತ ರಾಜ್ಯಗಳ ಆತಂಕ ದೂರ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸೋಮವಾರ ಹೇಳಿದೆ. ಪಶ್ಚಿಮಘಟ್ಟ ಸಂರಕ್ಷಣೆಯ ನಿಟ್ಟಿನಲ್ಲಿ ಘಟ್ಟ ವ್ಯಾಪ್ತಿಯ ಆರು ರಾಜ್ಯಗಳ ವಾದಕ್ಕೆ ಸ್ಪಂದಿಸಿ, ಹಿಂದಿನ ಅಧಿಸೂಚನೆಯನ್ನು ಪರಿಷ್ಕರಣೆ ಮಾಡಲಾಗಿದೆ. ಇದೀಗ ಒಟ್ಟು 56,825 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲಾಗಿದೆ. ಈ ಮೂಲಕ ಪಶ್ಚಿಮಘಟ್ಟದ ಅಮೂಲ್ಯ ಜೀವವೈವಿಧ್ಯ ಸಂರಕ್ಷಣೆಯ ಗುರಿ ಹೊಂದಲಾಗಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ರಾಜ್ಯಸಭೆಯಲ್ಲಿ ನೀಡಿದ ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಘೋಷಣೆಯಿಂದಾಗಿ ಘೋಷಿತ ಪ್ರದೇಶದ ಸಾಮಾನ್ಯ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರದು. ಜನವಸತಿ, ಕೃಷಿ ಚಟುವಟಿಕೆಗಳಿಗೆ ಇದರಿಂದಾಗಿ ಯಾವುದೇ ತೊಂದರೆಯಾಗದು ಎಂದು ಸಚಿವರು ಹೇಳಿದ್ದಾರೆ.
Advertisement