
ನವದೆಹಲಿ: ನಿಂತಿದ್ದ ಏರ್ ಇಂಡಿಯಾ ವಿಮಾನಕ್ಕೆ ಇದ್ದಕ್ಕಿದ್ದಂತೆ ಬಸ್ಸೊಂದು ಡಿಕ್ಕಿ ಹೊಡೆದ ಘಟನೆಯೊಂದು ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.
ಪ್ರಯಾಣಿಕರನ್ನು ಹೊತ್ತೊಯ್ಯುವ ಜೆಟ್ ಏರ್ ವೇಸ್ ಬಸ್ ಇಂದು ಬೆಳಿಗ್ಗೆ 5.45ರ ಸುಮಾರಿಗೆ ಚಾಲಕನ ನಿಯಂತ್ರಣ ಕಳೆದುಕೊಂಡು ಇದ್ದಕ್ಕಿದ್ದಂತೆ ನಿಂತಿದ್ದ ಏರ್ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಘಟನೆ ವೇಳೆ ಯಾರಿಗೂ ಗಾಯಗಳಾಗಿರುವ ಕುರಿತಂತೆ ವರದಿಗಳಾಗಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ವಿಮಾನದ ಕೆಲವು ಭಾಗಗಳು ಹಾನಿಗೊಳಗಾಗಿದೆ ಎಂದು ಹೇಳಲಾಗುತ್ತಿದೆ.
Advertisement