
ಬೆಂಗಳೂರು: ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯ ಪೋಷಕರು ಮಂಗಳವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಬಾಲಪರಾಧ ನ್ಯಾಯ ತಿದ್ದುಪಡಿ ಕಾಯ್ದೆಗೆ ರಾಜ್ಯಸಭೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದರು.
ರಾಹುಲ್ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ಭಯಾ ತಾಯಿ ಆಶಾದೇವಿ ಅವರು, ತಮ್ಮ ಪಕ್ಷ ರಾಜ್ಯಸಭೆಯಲ್ಲಿ ಬಾಲಪರಾಧ ನ್ಯಾಯ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಇದಕ್ಕೂ ಮುನ್ನ ನಿರ್ಭಯಾ ಪೋಷಕರು ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ಭೇಟಿ ಮಾಡಿ, ಬಾಲಪರಾಧ ನ್ಯಾಯ ತಿದ್ದುಪಡಿ ಕಾಯ್ದೆ ಅಂಗೀಕರಿಸುವಂತೆ ಒತ್ತಾಯಿಸಿದ್ದರು.
Advertisement