ಸಂಸತ್ ಕಲಾಪಕ್ಕೆ ಅಡ್ಡಿ ಉಂಟುಮಾಡುತ್ತಿರುವ ಕಾಂಗ್ರೆಸ್ ಸದಸ್ಯರಿಗೆ ರಾಷ್ಟ್ರೀಯ ಹಿತಾಸಕ್ತಿ ಮುಖ್ಯವಲ್ಲ, ಅವರದ್ದೇನಿದ್ದರೂ ಪಟ್ಟಭದ್ರ ಹಿತಾಸಕ್ತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿಡಿಸಿಎ ಭ್ರಷ್ಟಾಚಾರದಲ್ಲಿ ಅರುಣ್ ಜೇಟ್ಲಿ ವಿರುದ್ಧ ಆರೋಪ ಕೇಳಿಬಂದಿದ್ದು, ಅರುಣ್ ಜೇಟ್ಲಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಪರಿಣಾಮ ಲೋಕಸಭೆಯ ಪ್ರಶ್ನೋತ್ತರ ಕಲಾಪ ಮುಂದೂಡಲಾಗಿದ್ದು, ಸಂಸತ್ ಕಲಾಪ ವ್ಯರ್ಥವಾಗಿದೆ. ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದಲಾದರೂ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಕೈಬಿಟ್ಟು ಚರ್ಚೆಯಲ್ಲಿ ಪಾಲ್ಗೊಳ್ಳಲಿ ಎಂದು ಸುಮಿತ್ರಾ ಮಹಾಜನ್ ಸಲಹೆ ನೀಡಿದ್ದಾರೆ.