ಜೇಟ್ಲಿ ನಿವಾಸದ ಮುಂದೆ ಎಎಪಿ ಕಾರ್ಯಕರ್ತರ ಪ್ರತಿಭಟನೆ

ಅರುಣ್ ಜೇಟ್ಲಿ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಮಂಡಳಿ(ಡಿಡಿಸಿಎ) ಡಿಡಿಸಿಎ ಅಧ್ಯಕ್ಷರಾಗಿದ್ದಾಗ ಭ್ರಷ್ಟಾಚಾರ ನಡೆದಿದ್ದು...
ಎಎಪಿ ಕಾರ್ಯಕರ್ತರ ಪ್ರತಿಭಟನೆ
ಎಎಪಿ ಕಾರ್ಯಕರ್ತರ ಪ್ರತಿಭಟನೆ
Updated on: 
ನವದೆಹಲಿ: ಅರುಣ್ ಜೇಟ್ಲಿ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಮಂಡಳಿ(ಡಿಡಿಸಿಎ) ಡಿಡಿಸಿಎ ಅಧ್ಯಕ್ಷರಾಗಿದ್ದಾಗ ಭ್ರಷ್ಟಾಚಾರ ನಡೆದಿದ್ದು, ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಆಪ್ ಕಾರ್ಯಕರ್ತರು ಬುಧವಾರ ಜೇಟ್ಲಿ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. 
ಸೋಮನಾಥ್ ಭಾರತಿ ಸೇರಿದಂತೆ ಎಎಪಿ ನಾಯಕರು ಇಂದು ಜೇಟ್ಲಿ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಜೇಟ್ಲಿ ರಾಜಿನಾಮೆ ನೀಡಬೇಕು ಎಂದು ಘೋಷಣೆ ಕೂಗಿದ್ದಾರೆ.
ಸೋಮವಾರ ಅರುಣ್ ಜೇಟ್ಲಿ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಐವರು ಎಎಪಿ ನಾಯಕ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ನನ್ನ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದರಿಂದ ಎಎಪಿ ನಾಯಕರು ರು.10 ಕೋಟಿ ನೀಡಬೇಕು ಎಂದು ಹೇಳಿದ್ದರು. ಇತ್ತ ದೆಹಲಿ ಸರ್ಕಾರ ಹಗರಣ ಕುರಿತು ತನಿಖೆ ನಡೆಸಲು ಆಯೋಗ ರಚಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com