

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರು ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮ್ಮ ನಿವಾಸದಲ್ಲಿದ್ದಾಗ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡ ಮುಫ್ತಿ ಮೊಹಮ್ಮದ್ ಸಯೀದ್ ಅವರನ್ನು ವಿಶೇಷ ವಿಮಾನದ ಮೂಲಕ ದೆಹಲಿಗೆ ಕರೆತರಲಾಯಿತು.
79 ವರ್ಷದ ಸಯೀದ್ ಅವರನ್ನು ರಾಜ್ಯ ವಿಮಾನವೊಂದರಲ್ಲಿ ತುರ್ತಾಗಿ ದೆಹಲಿಗೆ ಒಯ್ದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳು (ಏಮ್ಸ್) ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಅಧಿಕೃತ ಮೂಲಗಳು ಹೇಳಿವೆ. 2015ರ ಮಾರ್ಚ್ ನಲ್ಲಿ ಸಯೀದ್ ಅವರು ಪಿಡಿಪಿ-ಬಿಜೆಪಿ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.