ನವದೆಹಲಿ: ಅಫ್ಘಾನಿಸ್ತಾನ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವ ಮಹತ್ವದ ಬೆಳವಣಿಗೆ ಬಗ್ಗೆ ಟ್ವೀಟ್ ಮಾಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ನಿರ್ಧರಿಸಿದ ಅದೊಂದು ‘ಮುತ್ಸದ್ದಿತನ’ದ ನಡೆ ಎಂದು ಶ್ಲಾಘಿಸಿದ್ದಾರೆ.
ನೆರೆಯ ರಾಷ್ಟ್ರಗಳೊಂದಿಗೆ ಹೀಗೆ ಆತ್ಮೀಯ ಸಂಬಂಧವನ್ನು ಇರಿಸಿಕೊಳ್ಳಬೇಕು ಎಂದೂ ಸಹ ಸುಷ್ಮಾ ಸ್ವರಾಜ್ ಅಭಿಪ್ರಾಯ ಪಟ್ಟಿದ್ದಾರೆ.
‘ಪ್ರಧಾನಿಯದ್ದು ಮುತ್ಸದ್ದಿತನದ ನಡೆ. ನೆರೆಹೊರೆಯವರ ಜೊತೆಗಿನ ಸಂಬಂಧ ಹೀಗೇ ಇರಬೇಕು' ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.