ರವಿಂದ್ರ ಜಡೇಜಾ ಟ್ವೀಟ್
ದೇಶ
ಮೋದಿ ಪಾಕ್ ಪ್ರವಾಸ: ಕಾಂಗ್ರೆಸ್ ಗೆ ಟಾಂಗ್ ನೀಡಿದ 'ಸರ್' ಜಡೇಜಾ
ಪ್ರಧಾನಿ ನರೇಂದ್ರ ಮೋದಿ ಅವರ ದಿಢೀರ್ ಪಾಕಿಸ್ತಾನ ಭೇಟಿ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಗೆ ಟ್ವಿಟರ್ ನಲ್ಲಿ ವ್ಯಂಗ್ಯ ಧಾಟಿಯ ಪ್ರತಿಕ್ರಿಯೆ ಬರುತ್ತಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದಿಢೀರ್ ಪಾಕಿಸ್ತಾನ ಭೇಟಿ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಗೆ ಟ್ವಿಟರ್ ನಲ್ಲಿ ವ್ಯಂಗ್ಯ ಧಾಟಿಯ ಪ್ರತಿಕ್ರಿಯೆ ಬರುತ್ತಿದ್ದು, ಕ್ರಿಕೆಟಿಗ ರವಿಂದ್ರ ಜಡೇಜಾ ಸಹ ಕಾಂಗ್ರೆಸ್ ವಿರೋಧವನ್ನು ಲೇವಡಿ ಮಾಡಿದ್ದಾರೆ.
ಮೋದಿ ಅವರ ಧಿಢೀರ್ ಪಾಕಿಸ್ತಾನದ ಭೇಟಿಯ ಕುರಿತು ಕಾಂಗ್ರೆಸ್ ಪಕ್ಷ ಅಸಮಾಧಾನಗೊಂಡಿರುವುದರಲ್ಲಿ ಯಾವುದೇ ಅಚ್ಚರಿ ಇಲ್ಲ. ಏಕೆಂದರೆ ಕಾಂಗ್ರೆಸ್ ನಾಯಕರು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸ್ವಇಚ್ಛೆಯಿಂದ ಶೌಚಾಲಯಕ್ಕೆ ಹೋಗುವುದಕ್ಕೂ ಬಿಟ್ಟಿರಲಿಲ್ಲ ಎಂದು ಲೇವಡಿ ಮಾಡಿದ್ದಾರೆ.
ಜಡೇಜಾ ವರ ಟ್ವೀಟ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲೂ ಹರಿದಾಡುತ್ತಿದ್ದು, ಮೋದಿ ಪಾಕಿಸ್ತಾನ ಭೇಟಿಗೆ ವಿರೋಧಿಸುತ್ತಿರುವ ಕಾಂಗ್ರೆಸ್ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ