
ಸರ್ಧಾನ(ಉತ್ತರ ಪ್ರದೇಶ): ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರಿಗೆ ಶನಿವಾರ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯಾ (ಇಸಿಸ್) ಉಗ್ರ ಸಂಘಟನೆಯಿಂದ ಬೆದರಿಕೆ ಕರೆ ಬಂದಿರುವುದಾಗಿ ಶನಿವಾರ ತಿಳಿದುಬಂದಿದೆ.
ಬೆದರಿಕೆ ಕರೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಂಗೀತ್ ಸೋಮ್ ಅವರು, ಇಸಿಸ್ ಉಗ್ರ ಸಂಘಟನೆಯಿಂದ ಬೆದರಿಕೆ ಕರೆಯೊಂದು ಬಂದಿದ್ದು, ಅಂತರ್ಜಾಲದ ಮೂಲಕ ಬಂದಿರುವ ಕರೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಇಸಿಸ್ ಸೇರಲು ಯತ್ನ ನಡೆಸಿದ್ದ ತೆಲಂಗಾಣ ಮೂಲದ ಮೂವರು ವಿದ್ಯಾರ್ಥಿಗಳನ್ನು ತೆಲಂಗಾಣ ಪೊಲೀಸ್ ಮತ್ತು ಮಹಾರಾಷ್ಟ್ರ ಉಗ್ರ ನಿಗ್ರಹ ದಳದ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧನಕ್ಕೊಳಪಡಿಸಿದ್ದರು.
Advertisement