ಮಂಗಳೂರು: ಮಂಗಳೂರಿನಲ್ಲಿ ಕೋಮುಗಲಭೆಯ ಆತಂಕದ ಛಾಯೆ ಆವರಿಸಿರುವ ಕಾರಣ ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಮತ್ತು ಇಸ್ಲಾಮಿಕ್ ನಾಯಕ ಡಾ. ಜಕೀರ್ ನಾಯ್ಕ್ ಅವರಿಗೆ ಮಂಗಳೂರು ಪ್ರವೇಶ ನಿರ್ಬಂಧಿಸಲಾಗಿದೆ.
ಮುಂಬೈ ಮೂಲದ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಸಂಸ್ಥಾಪಕ ಡಾ. ನಾಯ್ಕ್, ಜನವರಿ 3 ರಂದು ಮಂಗಳೂರಿಗೆ ಆಗಮಿಸಲಿದ್ದು ಮೂರು ದಿನಗಳ ಕಾಲ ದಕ್ಷಿಣ ಕರ್ನಾಟಕ ಸಲಾಫಿ ಮೂವ್‌ಮೆಂಟ್‌ನ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಅದೇ ವೇಳೆ ಗೋಹತ್ಯೆ, ಲವ್ ಜಿಹಾದ್ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮೊದಲಾದ ವಿಷಯಗಳ ಬಗ್ಗೆ ಚರ್ಚೆ ನಡೆಸುವುದಕ್ಕೆ ತೊಗಾಡಿಯಾ ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ, ಮಂಗಳೂರಿನಲ್ಲಿ ಆತಂಕದ ಪರಿಸ್ಥಿತಿ ಇರುವ ಕಾರಣ ಇವರಿಬ್ಬರಿಗೂ ಮಂಗಳೂರಿಗೆ ಪ್ರವೇಶ ನಿಷೇಧಿಸಲಾಗಿದೆ.