ಪೀಟರ್ ಮುಖರ್ಜಿಯ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಯ ಪರ ವಕೀಲ ಕುಶಾಲ್ ಮೊರ್ ಅವರು ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ವಿಚಾರಣೆಗೆ ಹಾಜರಾದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ವಿ. ಅದೊನೆ ಅವರು, ಮುಖರ್ಜಿ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ಮುಂದೂಡಿದರು.