ರಾಮ ಮಂದಿರ ನೀಲನಕ್ಷೆ ಜನವರಿಯಲ್ಲಿ ಬಿಡುಗಡೆ

ರಾಮ ಮಂದಿರದ ನಿರ್ಮಾಣದ ಬಗ್ಗೆ ಬಿಸಿ ಬಿಸಿ ಚರ್ಚೆಗಳಾಗುತ್ತಿರುವ ವೇಳೆಯಲ್ಲಿ ಇದೀಗ ರಾಮಮಂದಿರದ ನೀಲನಕ್ಷೆ ಜನವರಿಯಲ್ಲಿ ...
ಸುಬ್ರಮಣಿಯನ್ ಸ್ವಾಮಿ
ಸುಬ್ರಮಣಿಯನ್ ಸ್ವಾಮಿ
ನವದೆಹಲಿ: ರಾಮ ಮಂದಿರದ ನಿರ್ಮಾಣದ ಬಗ್ಗೆ ಬಿಸಿ ಬಿಸಿ ಚರ್ಚೆಗಳಾಗುತ್ತಿರುವ ವೇಳೆಯಲ್ಲಿ ಇದೀಗ ರಾಮಮಂದಿರದ ನೀಲನಕ್ಷೆ ಜನವರಿಯಲ್ಲಿ ಬಿಡುಗಡೆಯಾಗಲಿದೆ ಎಂಬ ಸುದ್ದಿ ಲಭಿಸಿದೆ.
ಈಗಾಗಲೇ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಶೀಘ್ರದಲ್ಲೇ ರಾಮ ಮಂದಿರವನ್ನು ನಿರ್ಮಾಣ ಮಾಡುವ ಬಗ್ಗೆ ಆಶ್ವಾಸನೆ ಕೊಟ್ಟಿದ್ದೇವೆ. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ಮನ್ನಣೆ ನೀಡಲಾಗುವುದು ಎಂದು ಎಂದು ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವ (ಸ್ವತಂತ್ರ ಖಾತೆ) ಮಹೇಶ್ ಶರ್ಮಾ ಹೇಳಿದ್ದಾರೆ.
ನಾವು ಸುಪ್ರೀಂ ಕೋರ್ಟ್ ಆದೇಶಕ್ಕೆ ಕಾಯುತ್ತಿದ್ದೇವೆ ಅದಕ್ಕಾಗಿ ರಾಮ ಮಂದಿರ ನಿರ್ಮಾಣ ವಿಳಂಬವಾಗುತ್ತಿದೆ ಎಂದಿದ್ದಾರೆ ಶರ್ಮಾ.
ಶರ್ಮಾ ಅವರ ಈ ಹೇಳಿಕೆಯನ್ನು ಬೆಂಬಲಿಸಿದ ಬಿಜೆಪಿಯ ಹಿರಿಯ ನಾಯಕು ಸುಬ್ರಮಣಿಯನ್ ಸ್ವಾಮಿ  2016 ಜನವರಿಯಲ್ಲಿ ರಾಮ ಮಂದಿರದ ನೀಲನಕ್ಷೆ ಬಿಡುಗಡೆಯಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com