ಜಮ್ಮು, ಕಾಶ್ಮೀರ ಸಿಎಂ ಮುಫ್ತಿ ಸಯೀದ್ ಐಸಿಯುಗೆ ದಾಖಲು

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರನ್ನು ಬುಧವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಎಐಐಎಂಎಸ್)ಯ...
ಮುಫ್ತಿ ಸಯೀದ್
ಮುಫ್ತಿ ಸಯೀದ್
Updated on
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರನ್ನು ಬುಧವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಎಐಐಎಂಎಸ್)ಯ ಐಸಿಯುಗೆ ಸ್ಥಳಾಂತರಿಸಲಾಗಿದೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮುಫ್ತಿ ಮೊಹಮ್ಮದ್ ಸಯೀದ್ ಅವರು ಕಳೆದ ಎಐಐಎಂಎಸ್‌ಗೆ ದಾಖಲಾಗಿದ್ದರು.
ಸಯೀದ್ ಅವರು ಅಸ್ವಸ್ಥರಾಗಿದ್ದು ಅವರಿಗೆ ‘ಆಕ್ಸಿಜನ್ ತೆರೆಪಿ’ಯ ಅಗತ್ಯವಿದೆ. ಹೀಗಾಗಿ ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದ್ದು ತಜ್ಞರ ತಂಡವೊಂದು ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
‘ಸಯೀದ್ ಅವರು ಎಚ್ಚರದಿಂದ ಇದ್ದು, ಮೌಖಿಕವಾಗಿ ಆಹಾರ ಸೇವಿಸುತ್ತಿದ್ದಾರೆ. ಸೋಂಕು ನಿರೋಧಿ ಔಷಧವನ್ನು ಅವರಿಗೆ ನೀಡಲಾಗುತ್ತಿದೆ’ ಎಂದು ಆಸ್ಪತ್ರೆಯ ಹೇಳಿಕೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com