ಕಿರಿಯ ದರ್ಜೆಯ ಹುದ್ದೆಗಳಿಗೆ ಇನ್ನು ಇಂಟರ್‍ವ್ಯೂ ಮಾಡಂಗಿಲ್ಲ

ಕಿರಿಯ ದರ್ಜೆಯ ಹುದ್ದೆಗಳಿಗೆ ಸಂದರ್ಶನ ನಡೆಸುವುದನ್ನು ಇನ್ನೆರಡು ದಿನಗಳಲ್ಲಿ ಸಂಪೂರ್ಣ ರದ್ದು ಮಾಡುವಂತೆ ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯ ಹಾಗೂ ಸಾರ್ವಜನಿಕ ಸ್ವಾಮ್ಯದ ಕಂಪನಿಗಳಿಗೆ ಮಂಗಳವಾರ ಸುತ್ತೋಲೆ ಕಳಿಸಲಾಗಿದೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)
Updated on: 

ನವದೆಹಲಿ: ಕಿರಿಯ ದರ್ಜೆಯ ಹುದ್ದೆಗಳಿಗೆ ಸಂದರ್ಶನ ನಡೆಸುವುದನ್ನು ಇನ್ನೆರಡು ದಿನಗಳಲ್ಲಿ ಸಂಪೂರ್ಣ ರದ್ದು ಮಾಡುವಂತೆ ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯ ಹಾಗೂ ಸಾರ್ವಜನಿಕ ಸ್ವಾಮ್ಯದ ಕಂಪನಿಗಳಿಗೆ ಮಂಗಳವಾರ ಸುತ್ತೋಲೆ ಕಳಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಈ ಹಿಂದೆ ಹೇಳಿದಂತೆ, ಕೇಂದ್ರ ಸರ್ಕಾರದ ಎಲ್ಲಾ ಗ್ರೂಪ್ ಸಿ ಹಾಗೂ ನಾನ್ ಗೆಜೆಟೆಡ್ ಗ್ರೂಪ್ ಬಿ ದರ್ಜೆ ಹುದ್ದೆಗಳಿಗೆ ಸಂದರ್ಶನ ನಡೆಸುವುದನ್ನು 2015ರ ಡಿಸೆಂಬರ್ 31ರಂದು ಕೈಬಿಡಲಾಗುವುದು.

ಜ.1ರಿಂದ ನಿಗದಿತ ದರ್ಜೆಯ ಹುದ್ದೆಗಳ ಆಯ್ಕೆಗೆ ಸಂದರ್ಶನ ನಡೆಸುವಂತಿಲ್ಲ. ಅಗತ್ಯಬಿದ್ದಲ್ಲಿ ಕೌಶಲ್ಯ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆಗಳನ್ನು ನಡೆಸಬಹುದಾಗಿದೆ. ಈ ಸಂಬಂಧ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊಸ ಸುತ್ತೋಲೆ ಕಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com