ತಿಮ್ಮಪ್ಪನ ದರ್ಶನಕ್ಕಾಗಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ನೂಗುನುಗ್ಗಲು ಹೆಚ್ಚಾಗುತ್ತದೆ. ಈ ಹಿನ್ನಲೆಯಲ್ಲಿ ವಿಐಪಿ ದರ್ಶನ ರದ್ದುಗೊಳಿಸಲು ಟಿಟಿಡಿ ನಿರ್ಧರಿಸಿದೆ. ಅಷ್ಟೇ ಅಲ್ಲದೇ, ಬೆಟ್ಟದಲ್ಲಿ ವಿಐಪಿಗಳಿಗೆ ನೀಡುವ ಸೌಲಭ್ಯವನ್ನು ಕಡಿತಗೊಳಿಸಲು ನಿರ್ಧಾರ ತೆಗೆದುಕೊಂಡಿದೆ ಎಂದು ಟಿಟಿಡಿ ಪಿಆರ್ ಓ ರವಿ ತಿಳಿಸಿದ್ದಾರೆ.