ನೇಪಾಳದ ರಾಜಕೀಯ ಬೆಳವಣಿಗೆ ಬಗ್ಗೆ ಮೋದಿ- ನೇಪಾಳ ಪ್ರಧಾನಿ ಚರ್ಚೆ

ನೇಪಾಳದ ರಾಜಕೀಯ ಬೆಳವಣಿಗೆ ಬಗ್ಗೆ ನೇಪಾಳ ಪ್ರಧಾನಿ ಕೆ ಪಿ ಶರ್ಮಾ ಓಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ.
ನರೇಂದ್ರ ಮೋದಿ- ಕೆ ಪಿ ಶರ್ಮಾ ಓಲಿ(ಸಂಗ್ರಹ ಚಿತ್ರ)
ನರೇಂದ್ರ ಮೋದಿ- ಕೆ ಪಿ ಶರ್ಮಾ ಓಲಿ(ಸಂಗ್ರಹ ಚಿತ್ರ)

ನವದೆಹಲಿ: ನೇಪಾಳದ ರಾಜಕೀಯ ಬೆಳವಣಿಗೆ ಬಗ್ಗೆ ನೇಪಾಳ ಪ್ರಧಾನಿ ಕೆ ಪಿ ಶರ್ಮಾ ಓಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ.
ನೇಪಾಳ ಎದುರಿಸುತ್ತಿರುವ ರಾಜಕೀಯ ಸಮಸ್ಯೆಗಳಿಗೆ ದೀರ್ಘಕಾಲದ ಪರಿಹಾರ ಕಂಡುಕೊಳ್ಳುವಂತೆ ಪ್ರಧಾನಿ ಮೋದಿ ನೇಪಾಳ ಪ್ರಧಾನಿಗೆ ಒತ್ತಾಯಿಸಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ನೇಪಾಳದ ಜನತೆಗೆ ಹೊಸ ವರ್ಷ 2016 ರ ಶುಭಾಷಯ ತಿಳಿಸಿದ್ದಾರೆ ಎಂದು ವಿದೇಶಾಂಗ ಇಲಾಖೆ ಪ್ರಕಟಣೆ ತಿಳಿಸಿದೆ.
ನೇಪಾಳದಲ್ಲಿ ಜಾರಿಗೆ ಬಂದಿರುವ ಹೊಸ ಸಂವಿಧಾನದಲ್ಲಿನ ಕೆಲವೊಂದು ಅಂಶಗಳನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದು, ಈ ವರೆಗೂ 50 ಜನರು ಮೃತಪಟ್ಟಿದ್ದಾರೆ. ನೂತನ ಸಂವಿಧಾನದಲ್ಲಿ ಮಾದೇಶಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಭಾರತದಿಂದ ನೇಪಾಳಕ್ಕೆ ಪೂರೈಕೆಯಾಗಬೇಕಿರುವ ಅಗತ್ಯ ವಸ್ತುಗಳು ಸ್ಥಗಿತಗೊಂಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com