
ನವದೆಹಲಿ : ವಾಯುಮಾಲಿನ್ಯ ಮತ್ತು ಸಂಚಾರ ದಟ್ಟಣೆ ನಿಯಂತ್ರಿಸಲು ಸಮ ಮತ್ತು ಬೆಸ ಸಂಖ್ಯೆಯ ನೋಂದಣಿ ಹೊಂದಿರುವ ವಾಹನಗಳಿಗೆ ದಿನ ಬಿಟ್ಟು ದಿನ ಮಾತ್ರ ಸಂಚಾರಕ್ಕೆ ಅನುಮತಿ ನೀಡುವ ದೆಹಲಿ ಸರ್ಕಾರದ ಮಹತ್ವಾಂಕಾಂಕ್ಷಿ ಯೋಜನೆಗೆ ಇಂದಿನಿಂದ ಚಾಲನೆ ದೊರೆತಿದೆ. ಜನವರಿ 1ರಿಂದ 15 ದಿನಗಳ ಅವಧಿಗೆ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ತರಲಾಗಿದೆ.
ಹೊಸ ವರ್ಷದ ಮೊದಲ ದಿನವೇ ಜಾರಿಯಾದ ಈ ಯೋಜನೆಗೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ. ಹಲವು ಸ್ವಯಂ ಸೇವಾ ಸಂಸ್ಥೆಗಳ ಸಾವಿರಾರು ಕಾರ್ಯಕರ್ತರು ಕೂಡ ಈ ಚಳವಳಿಗೆ ಕೈಜೋಡಿಸಿದ್ದಾರೆ. ಹೊಸ ಸಂಚಾರ ನಿಯಮ ಜಾರಿಗೊಳಿಸಲು ಪೊಲೀಸರಿಗೆ ಸಹಕಾರ ನೀಡುತ್ತಾ ಭಿತ್ತಿ ಪತ್ರಗಳನ್ನು ಹಿಡಿದು ದೆಹಲಿಯನ್ನು ವಾಯು ಮಾಲಿನ್ಯದಿಂದ ರಕ್ಷಿಸಿ ಎಂಬ ಸಂದೇಶ ಸಾರುತ್ತಿದ್ದಾರೆ.
ನಿಯಮವನ್ನು ಉಲ್ಲಂಘಿಸುವವರಿಗೆ 2 ಸಾವಿರ ದಂಡ ಅನ್ವಯಿಸುತ್ತದೆ.ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ, ರಾಜ್ಯಪಾಲರು, ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳು, ಲೋಕಸಭೆಯ ಸ್ಪೀಕರ್ ಹಾಗೂ ಕೇಂದ್ರ ಸಚಿವರ ವಾಹನಗಳಿಗೂ ಈ ನಿಮಯದಿಂದ ವಿನಾಯ್ತಿ ನೀಡಲಾಗಿದೆ.
Advertisement