ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2.42, ಡೀಸೆಲ್ 2.25 ಇಳಿಕೆ

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆಯಾಗಿದ್ದು, ಗ್ರಾಹಕರ ಮೊಗದಲ್ಲಿ ನಗೆ ಅರಳಿದೆ. ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ರು. 2.42, ಡೀಸೆಲ್ ದರ ರು. 2.25 ಇಳಿಕೆಯಾಗಿದೆ.
ಪೆಟ್ರೋಲ್, ಡೀಸೆಲ್ ದರ ಇಳಿಕೆ
ಪೆಟ್ರೋಲ್, ಡೀಸೆಲ್ ದರ ಇಳಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆಯಾಗಿದ್ದು, ಗ್ರಾಹಕರ ಮೊಗದಲ್ಲಿ ನಗೆ ಅರಳಿದೆ.

ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ರು. 2.42, ಡೀಸೆಲ್ ದರ ರು.2.25 ಇಳಿಕೆಯಾಗಿದ್ದು, ಪರಿಷ್ಕೃತ ದರ ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರೆಲ್ ಕಚ್ಚಾತೈಲ ಬೆಲೆ 40 ಡಾಲರ್‘ಗೆ ಕುಸಿದ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಮುಖವಾಗಿದೆ. ಸದ್ಯದ, ಟ್ರೆಂಡ್ ನೋಡಿದರೆ ಮತ್ತಷ್ಟು ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com