

ಇಸ್ಲಾಮಾಬಾದ್: ಒಂದುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿರುವ ಅಮಾನವೀಯ ಕೃತ್ಯ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ.
ಮನೆಯಿಂದ ನಾಪತ್ತೆಯಾಗಿದ್ದ ಮಗುವಿಗಾಗಿ ಹುಡುಕಾಟ ನಡೆಸಿದ ಪೋಷಕರಿಗೆ ಮನೆಯ ಹತ್ತಿರದ ರಸ್ತೆಯಲ್ಲಿ ಮಗುವಿನ ದೇಹ ಪತ್ತೆಯಾಗಿದೆ. ಕೂಡಲೇ ಪೋಷಕರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡ ಪೊಲೀಸರು ಸ್ಥಳ ಪರೀಶಲನೆ ನಡೆಸಿದ್ದು, ಪ್ರಾಥಮಿಕ ತನಿಖೆ ವೇಳೆಯಲ್ಲಿ ಮಗುವಿನ ಮೇಲೆ ಅತ್ಯಾಚಾರ ಮಾಡಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಹೆಚ್ಚುವರಿ ಪೊಲೀಸ್ ಆಯುಕ್ತೆ ರುಬೀನಾ ಹಸೀನ್ ತಿಳಿಸಿದ್ದಾರೆ. ತನಿಖೆ ಪ್ರಾರಂಭಿಸಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.