ಕೇಜ್ರಿವಾಲ್ 'ಉತ್ತಮ ಮನುಷ್ಯ' ಎಂದ ಬಿಜೆಪಿಯ ಶತ್ರುಘ್ನ ಸಿನ್ಹಾ

ಶತ್ರುಘ್ನ ಸಿನ್ಹಾ
ಶತ್ರುಘ್ನ ಸಿನ್ಹಾ
Updated on: 

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇದ್ದು, ಈ ಮಧ್ಯೆ ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ ಅವರು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಉತ್ತಮ ಮನುಷ್ಯ ಎಂದು ಹೊಗಲಿದ್ದಾರೆ.

ಬಾಲಿವುಡ್ ಹಿರಿಯ ನಟ ಶತ್ರುಘ್ನ ಸಿನ್ಹಾ ಕೊನೆಯ ಘಳಿಗೆಯಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ. ಕೇಜ್ರಿವಾಲ್ರ ಆಮ್ ಆದ್ಮಿ ಪಕ್ಷಕ್ಕೆ ಉತ್ತಮ ಭವಿಷ್ಯವಿದೆ ಎಂದ ಅವರು ಕಿರಣ್ ಬೇಡಿ ಸಹ ಒಳ್ಳೆಯ ಮುಖ್ಯಮಂತ್ರಿ ಅಭ್ಯರ್ಥಿ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ನಾಯಕರಾಗಿದ್ದು, ಚುನಾವಣೆಯಲ್ಲಿ ಪಕ್ಷ ಗೆಲ್ಲಲಿ ಅಥವಾ ಸೋಲಲಿ ಅದಕ್ಕೆ ಮೋದಿ ಅವರೇ ನೇರ ಹೊಣೆ ಎಂದು ಸಿನ್ಹಾ ಹೇಳಿದ್ದಾರೆ.

ದೆಹಲಿ ವಿಧಾನಸಭೆಗೆ ಫೆಬ್ರವರಿ 7ರಂದು ಮತದಾನ ನಡೆಯಲಿದ್ದು, 10 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಈ ಮಧ್ಯೆ ಕೆಲ ಸಮೀಕ್ಷೆಗಳು ದೆಹಲಿಯಲ್ಲಿ ಬಿಜೆಪಿ ಅಥವಾ ಎಎಪಿ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಗಳನ್ನು ಹೊರಹಾಕಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com